ಬ್ರೇಕಿಂಗ್ ನ್ಯೂಸ್
23-10-23 10:46 pm Mangalore Correspondent ಕರಾವಳಿ
ಮಂಗಳೂರು, ಅ.23: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Brutal accident in Mangalore, two wheeler rider crushes, face unidentified after bus rams bike at Rao and Rao circle. Traffic police have requested the family to come forward if anyone is found missing.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm