Mangalore Bantwal Youth commits suicide: ಮೀನು ವ್ಯಾಪಾರದಲ್ಲಿ ನಷ್ಟ , ಬ್ಯಾಂಕಿಗೆ ಸಾಲ ತೀರಿಸಲು ಕಷ್ಟ ; ನೇಣಿಗೆ ಶರಣಾದ ಯುವಕ !

23-10-23 11:01 pm       Mangalore Correspondent   ಕರಾವಳಿ

ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.

ಬಂಟ್ವಾಳ, ಅ23: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.

ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ.

ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.

ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ‌ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದ.

ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. 

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Mangalore Bantwal Youth commits suicide due to fish business loss, loss and loan.