ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm