ಬ್ರೇಕಿಂಗ್ ನ್ಯೂಸ್
12-11-20 02:51 pm Udupi Correspondent ಕರಾವಳಿ
ಉಡುಪಿ, ನ.12: ಮಾಜಿ ಸಚಿವ ಬಸನಗೌಡ ಯತ್ನಾಳ್ ಸರಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ್ರಮ ತೆಗೆದುಕೊಳ್ಳುವ ಮಾತನಾಡಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರು ಕೂಡ ಪಕ್ಷದ ಸೀಮಿತ, ನಿಯಮಗಳನ್ನು ಮೀರಿ ವರ್ತನೆ ಮಾಡಬಾರದು. ಈ ಬಗ್ಗೆ ಪಕ್ಷದ ವಿಚಾರ, ಸಿದ್ಧಾಂತ ಹಾಗೂ ನಿಯಮದ ಆಧಾರದಲ್ಲಿ ಮಾತುಕತೆ ಮಾಡಿದ್ದೇವೆ. ಅವರ ವಿರುದ್ಧ ಪಕ್ಷದ ಒಳಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ಕೈಗೊಂಡಿದ್ದೇವೆ ಎಂದಿದ್ದಾರೆ.
ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿಗೆ ಸಂಬಂಧಿಸಿ ಸಂಪತ್‌ರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯಲ್ಲೂ ಸಂಪತ್ ರಾಜ್ ಕೈವಾಡ ಇರುವುದು ಸಂಪೂರ್ಣ ಬಹಿರಂಗ ಆಗಿದೆ. ಸಂಪತ್‌ರಾಜ್ ನಾಪತ್ತೆಯಾಗಿದ್ದು ಅದರ ಬಗ್ಗೆ ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕಾಗಿದೆ ಎಂದು ಅವರು ಹೇಳಿದರು.
ಡಿಕೆಶಿಗೆ ನೈತಿಕತೆ ಇದ್ದರೆ ಸಂಪತ್‌ರಾಜ್‌ಗೆ ಶರಣಾಗುವಂತೆ ಹೇಳಬೇಕು. ಸಂಪತ್ ರಾಜ್ ತಪ್ಪಿಸಿಕೊಳ್ಳುವುದರ ಹಿಂದೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರಭಾವ ಇದೆ. ಸಂಪತ್ ರಾಜ್‌ನನ್ನು ಸರಕಾರ ಬಂಧನ ಮಾಡಲೇಬೇಕು ಎಂದು ನಳಿನ್ ಒತ್ತಾಯಿಸಿದರು.
ಉಪಚುನಾವಣೆ ಸೋಲಿಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಕಾರಣ ಎಂಬುದಾಗಿ ಕಾರ್ಯಕರ್ತರು ಹೈಕಮಾಂಡಿಗೆ ಪತ್ರ ಬರೆದಿರುವುದು ಬಹಿರಂಗ ಆಗಿದೆ. ಆರ್.ಆರ್. ನಗರ ಸೋಲಬೇಕು ಎಂಬುದಾಗಿ ಸಿದ್ದರಾಮಯ್ಯ, ಶಿರಾ ಸೋಲಬೇಕು ಎಂಬುದಾಗಿ ಡಿಕೆಶಿ ಒಳರಾಜಕಾರಣ ಮಾಡಿದ್ದಾರೆ. ಇದು ಬಿಜೆಪಿಗೆ ಲಾಭ ಆಗಿದೆ. ಈ ವಿಚಾರ ಕಾರ್ಯಕರ್ತರಿಗೆ ಗೊತ್ತಾಗಿ ಅಸಮಾಧಾನ ಭುಗಿಲೆದ್ದಿದೆ ಎಂದು ಅವರು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯೇ ಅಥವಾ ಸರ್ಜರಿಯೇ ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಕರಾವಳಿಗೆ ಹೆಚ್ಚಿನ ಸಚಿವ ಸ್ಥಾನ ಸಿಗಬಹುದೇ ಅಥವಾ ಕಳೆದುಕೊಳ್ಳಬಹುದೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಎಲ್ಲವನ್ನು ಗಮನಿಸುತ್ತಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಲು ಮತ್ತು ರಾಜ್ಯದ ಹಿತದೃಷ್ಠಿಯಿಂದ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ನಮಗಿಂತ ಹಿರಿಯರಾಗಿದ್ದು ಅವರಿಗೆ ನಾವು ಸಲಹೆ ನೀಡಬೇಕಾಗಿಲ್ಲ ಎಂದು ಹೇಳಿದರು.
Will take serious action against Basangouda Patil Yatnal said BJP state president Naleen Kumar Kateel at Udupi.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm