ಬ್ರೇಕಿಂಗ್ ನ್ಯೂಸ್
26-10-23 06:59 pm Mangalore Correspondent ಕರಾವಳಿ
ಪುತ್ತೂರು, ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ.
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು. ಶಶಿಕಲಾ ಅವರು ಆ ಲಾಕೆಟ್ ನೊಂದಿಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ.
ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರ ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mangalore Sullia woman photo with tiger claw goes viral on social media.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm