ಬ್ರೇಕಿಂಗ್ ನ್ಯೂಸ್
26-10-23 09:20 pm Mangalore Correspondent ಕರಾವಳಿ
ಮಂಗಳೂರು, ಅ.26: ಜಿಲ್ಲಾಡಳಿತದಿಂದ ಮರಳು ನೀತಿ ಜಾರಿಗೊಳಿಸದ ಹಿನ್ನೆಲೆಯಲ್ಲಿ ಅಧಿಕೃತವಾಗಿ ಮರಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಬೇಕಾದಷ್ಟು ಮರಳು ಸಿಗುತ್ತೆ. ಕಾಳಸಂತೆಯ ಮರಳಿಗೆ ಒಂದು ಲೋಡ್ ಮರಳಿಗೆ 21 ಸಾವಿರ ರೂ. ಕೇಳುತ್ತಿದ್ದಾರೆ. ಅಷ್ಟು ದರ ಕೊಟ್ಟರೆ ಎಲ್ಲಿಗೆ ಬೇಕಾದರೂ ಮರಳು ಹಾಕುತ್ತಾರೆ. ಜಿಲ್ಲಾಡಳಿತವೇ ಇಂತಹ ಅಕ್ರಮಕ್ಕೆ ಅವಕಾಶ ನೀಡುತ್ತಿದ್ದು, ಇದರಿಂದ ಕಟ್ಟಡ ಮಾಲಕರು, ನಿರ್ಮಾಣಕಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಿವಿಲ್ ಕಂಟ್ರಾಕ್ಟರ್ ಅಸೋಸಿಯೇಶನ್ ಸಂಘದವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘದ ಪ್ರಮುಖರಾದ ಬಸ್ತಿ ಪುರುಷೋತ್ತಮ ಶೆಣೈ ಮತ್ತು ಮಹಾಬಲ ಕೊಟ್ಟಾರಿ, ಕಟ್ಟಡ ನಿರ್ಮಾಣಕ್ಕೆ ನೈಸರ್ಗಿಕವಾಗಿ ಸಿಗುತ್ತಿದ್ದ ಮರಳು ಇತ್ತೀಚಿನ ವರ್ಷಗಳಲ್ಲಿ ಸೂಕ್ತ ದರದಲ್ಲಿ ಸಿಗದಂತಾಗಿದೆ. ಇದರಿಂದ ಗುತ್ತಿಗೆದಾರರು, ಕಟ್ಟಡ ನಿರ್ಮಾಣಕಾರರು ಕಾಳಸಂತೆಯಲ್ಲಿ ದುಬಾರಿ ದರ ಕೊಟ್ಟು ಖರೀದಿಸುವ ಸ್ಥಿತಿಯಾಗಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ, ಕ್ರಮ ಕೈಗೊಂಡಿಲ್ಲ. ಕಾನೂನು ರೀತಿಯಲ್ಲಿ ಮರಳು ಲಭ್ಯವಾಗದ್ದರಿಂದ ಸರಕಾರದ ರಾಯಧನಕ್ಕೂ ವಂಚನೆಯಾಗುತ್ತದೆ. ಈ ಬಗ್ಗೆ ಜೂನ್ ತಿಂಗಳಲ್ಲಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದು ಆಗಸ್ಟ್ ತಿಂಗಳಲ್ಲಿ ಮರಳು ಪೂರೈಕೆ ಅನುಮತಿ ನೀಡುವುದಾಗಿ ತಿಳಿಸಿದ್ದರು.
ನಾನ್ ಸಿಆರ್ ಝೆಡ್ ವಲಯದಲ್ಲಿ ಮರಳುಗಾರಿಕೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಿಡ್ಡುದಾರರು ವೇಯಿಂಗ್ ಬ್ರಿಜ್ ಮಾಡದೇ ಇರುವುದರಿಂದ ಮರಳು ಸಾಗಣೆಗೆ ಗಣಿ ಇಲಾಖೆ ಅವಕಾಶ ನೀಡುತ್ತಿಲ್ಲ. ಜಿಲ್ಲೆಯಲ್ಲಿ ಪೂರೈಕೆಯಾಗುವ ಎಂ ಸ್ಯಾಂಡ್ ಗುಣಮಟ್ಟವೂ ಚೆನ್ನಾಗಿಲ್ಲದ ಕಾರಣ ಕಟ್ಟಡ ಮಾಲೀಕರು ಅದನ್ನು ಬಳಸಲು ಹಿಂಜರಿಯುತ್ತಿದ್ದಾರೆ. ಇದೇ ರೀತಿಯಾದಲ್ಲಿ ಸಂಪೂರ್ಣ ಕಾಮಗಾರಿಯನ್ನು ನಿಲ್ಲಿಸಬೇಕಾದ ಸ್ಥಿತಿ ಬರುತ್ತದೆ. ಎರಡು ವಾರದ ಗಡುವು ನೀಡುತ್ತಿದ್ದು ಮರಳು ಪೂರೈಕೆಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಿಲ್ಲಿಸುತ್ತೇವೆ. ಇದರಿಂದ ಕಟ್ಟಡ ಕೆಲಸ ಮಾಡುವ ಮೇಸ್ತ್ರಿಗಳು, ಮರದ ಕೆಲಸಗಾರರು, ಕಬ್ಬಿಣದ ಕೆಲಸಗಾರರು, ಕೂಲಿ ಕಾರ್ಮಿಕರು ಕೆಲಸ ಇಲ್ಲದೆ ಉಪವಾಸ ಬೀಳುವ ಸ್ಥಿತಿಯಾಗಲಿದೆ. ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಬೇಕು ಎಂದು ಹೇಳಿದರು. ಇದಲ್ಲದೆ, ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಕಾರ್ಮಿಕರ ಜೊತೆಗೂಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Sand sold in illegal manner slams civil contractor's in Mangalore.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm