ಬ್ರೇಕಿಂಗ್ ನ್ಯೂಸ್
30-10-23 08:09 pm Mangalore Correspondent ಕರಾವಳಿ
ಬಂಟ್ವಾಳ, ಅ.30: ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ನವ ವಿವಾಹಿತ ತರುಣಿ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಸಜೀಪ ಮೂಡದಲ್ಲಿ ನಡೆದಿದೆ.
ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಯುವತಿ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಪ್ರೇಮವಿವಾಹ ಆಗಿದ್ದರೂ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾಗಿದ್ದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝುಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿ, ಮಾನಸಿಕ ಕಿರುಕುಳ ಕೊಡುತ್ತಿದ್ದರು. ಇದರಿಂದ ಬೇಸತ್ತ ನೌಸೀನ್ ಉಳ್ಳಾಲದ ಗಂಡನ ಮನೆಯಿಂದ ಸಜೀಪ ಗ್ರಾಮದ ತಾಯಿ ಮನೆಗೆ ಬಂದಿದ್ದಳು. ಮಾನಸಿಕವಾಗಿ ನೊಂದಿದ್ದ ನೌಸೀನ ಅ.25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ಅಣ್ಣ ನಾಸೀರ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಲವ್ ಮ್ಯಾರೇಜ್, ಚಿನ್ನಾಭರಣ ಮಾರಿದ್ದ ಗಂಡ
ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಉಳ್ಳಾಲ ಮೂಲದ ಯುವಕ ಅಜ್ಮಾನ್ ಎಂಬಾತನಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿದ್ದಳ. ಬಳಿಕ ಇವರು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಆಗಸ್ಟ್ 14 ರಂದು ಮದುವೆಯಾಗಿದ್ದರು. ಆದರೆ ಅಜ್ಮಾನ್ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಬಳಿಯಿದ್ದ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದಲ್ಲದೆ ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರೆಂದು ತಾಯಿ ಮನೆಯಲ್ಲಿ ಮಗಳು ತಿಳಿಸಿದ್ದಳು.
ಗಂಡನ ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
Dowry harrassment, 22 year old newly married girl commits suicide at her house at Bantwal in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm