ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm