ಬ್ರೇಕಿಂಗ್ ನ್ಯೂಸ್
03-11-23 09:19 pm Mangalore Correspondent ಕರಾವಳಿ
ಮಂಗಳೂರು, ನ.3: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 30 ರಂದು ಬಂಗ್ರಕುಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಗೌರವ ಸಲಹೆಗಾರ ಪ್ರಸಾದ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಚೌಟ ಮಾತನಾಡಿ 7ನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡ ಲೋಕೇಶ್ ಕುಮಾರ್ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೆಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಂಗಳೂರು ಕಂಬಳ ಸಮಿತಿಯ ಕಾರ್ಯದರ್ಶಿ ಮನ್ಮಥ ಶೆಟ್ಟಿಯವರನ್ನು ಕಂಬಳ ಸಮಿತಿಯಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ವಿಜಯಕುಮಾರ್ ಕಂಗಿನಮನೆ, ಮಹಾನಗರ ಪಾಲಿಕೆ ಸದಸ್ಯರಾದ ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಉಪಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
December 30 to 31 7th year Kambala to be held in Mangalore by Brijesh Chowta at Gold finch city.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm