ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm