ಬ್ರೇಕಿಂಗ್ ನ್ಯೂಸ್
03-11-23 11:00 pm Mangalore Correspondent ಕರಾವಳಿ
ಮಂಗಳೂರು, ನ.3: ಸ್ಮಾರ್ಟ್ ಸಿಟಿ ಯೋಜನೆಯಡಿ ಕದ್ರಿ ಪಾರ್ಕ್ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡು ಉದ್ಘಾಟನೆ ಪೂರ್ತಿಗೊಳಿಸಿ ಎಂಟು ತಿಂಗಳು ಕಳೆದರೂ ಅಲ್ಲಿನ ಮಳಿಗೆಗಳನ್ನು ಹಸ್ತಾಂತರಿಸದೆ ಜಿಲ್ಲಾಡಳಿತ ಕಾಲ ತಳ್ಳುತ್ತಿದ್ದಾರೆ. ಇದರ ಹಿಂದೆ ಕಾಂಗ್ರೆಸಿನ ಸ್ವಜನ ಪಕ್ಷಪಾತದ ಅನುಮಾನ ಮೂಡುತ್ತಿದ್ದು, ಯಾರೋ ತಮ್ಮ ಆಪ್ತರಿಗೆ ಇದರ ಟೆಂಡರ್ ಮಾಡಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸಿನವರು ಅಧಿಕಾರ ದುರುಪಯೋಗ ಪಡಿಸಿ ತಮ್ಮವರಿಗೆ ಟೆಂಡರ್ ಮಾಡಲು ಯತ್ನಿಸುತ್ತಿದ್ದಾರೆ. ಒಮ್ಮೆ ಟೆಂಡರ್ ಆಗಿದ್ದ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿದ್ದಾರೆ. ಈಗ ಯಾರಿಗೋ ಕಾಂಗ್ರೆಸ್ ನಾಯಕರೊಬ್ಬರಿಗೆ ಟೆಂಡರ್ ಸಿಗ್ತಾ ಇದೆಯೆಂದು ಮಾಹಿತಿ ಇದೆ. ನನಗೆ ಅದರ ಮಾಹಿತಿ ಸಿಕ್ಕಿದ್ದು, ಕೆಲವೇ ದಿನಗಳಲ್ಲಿ ಅಧಿಕೃತ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. 12 ಕೋಟಿ ವೆಚ್ಚದಲ್ಲಿ ಕದ್ರಿ ಪಾರ್ಕ್ ಎದುರು ಭಾಗದಲ್ಲಿ ಅಂಗಡಿ ಮಳಿಗೆಗಳು, ಕುಳಿತುಕೊಳ್ಳಲು ವ್ಯವಸ್ಥೆ ಎಲ್ಲವನ್ನೂ ಮಾಡಲಾಗಿತ್ತು. ಆದರೆ ಇದಾಗಿ ಎಂಟು ತಿಂಗಳಾದರೂ ಅವನ್ನು ವ್ಯಾಪಾರಿಗಳಿಗೆ ಹಸ್ತಾಂತರಿಸದೆ ತುಕ್ಕು ಹಿಡಿಯಲು ಬಿಟ್ಟಿದ್ದಾರೆ ಎಂದು ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಜನಸಾಮಾನ್ಯರಿಗೆ ಮರಳು ಸಿಗದೆ ದೂರು ಹೇಳಿಕೊಂಡು ಬರುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಅವರೇ ಜಿಲ್ಲೆಯಲ್ಲಿ ಮರಳು ನೀತಿ ಮಾಡಬೇಕಿದೆ. ಸಿಆರ್ ಝೆಡ್, ನಾನ್ ಸಿಆರ್ ಝೆಡ್ ವಲಯದಲ್ಲಿ ಮರಳುಗಾರಿಕೆ ನಡೆಸಲು ಅವಕಾಶ ನೀಡಬೇಕು. ಈಗಾಗಲೇ ಕಟ್ಟಡ ನಿರ್ಮಾಣಕಾರರು ದೂರು ಹೇಳಿಕೊಂಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮಾತನಾಡಿದ್ದೇನೆ, ಮಾಡುತ್ತೇವೆಂದು ಹೇಳಿದರೂ ಸಮಸ್ಯೆ ಬಗೆಹರಿಸುವ ಪ್ರಯತ್ನ ಆಗಿಲ್ಲ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 23 ಡಯಾಲಿಸಿಸ್ ಯಂತ್ರಗಳಿದ್ದು, ಅದರಲ್ಲಿ 9 ಯಂತ್ರಗಳು ಕೆಟ್ಟು ಹೋಗಿ ಆರು ತಿಂಗಳು ಕಳೆದಿದೆ. ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳಾದರೂ ಅದನ್ನು ಸರಿಪಡಿಸಲು ಮುಂದಾಗಿಲ್ಲ. ಇದರಿಂದ ಡಯಾಲಿಸಿಸ್ ಗೆ ಬರುವ ರೋಗಿಗಳು ಕಷ್ಟ ಪಡುತ್ತಿದ್ದಾರೆ ಎಂದರು. ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಿಂದಾಗಿ ಶಾಸಕರ ಪ್ರದೇಶಾಭಿವೃದ್ಧಿಗೆ ಅನುದಾನ ಕೊಡುತ್ತಿಲ್ಲ. ಹೊಸ ಅನುದಾನ ಇಲ್ಲದಿದ್ದರೂ, ಹಳೆಯದನ್ನಾದರೂ ಕೊಡಿಯೆಂದು ಕೇಳಿದರೂ ಕೊಡುತ್ತಿಲ್ಲ. ಕಳೆದ ಬಾರಿ ಬೊಮ್ಮಾಯಿ ಸರಕಾರ ಇದ್ದಾಗ ಪಾಸ್ ಮಾಡಿದ್ದ ಯೋಜನೆಗಳು, ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ಅನುದಾನಗಳನ್ನು ಕೊಡಲಿ ಎಂದು ವೇದವ್ಯಾಸ ಕಾಮತ್ ಆಗ್ರಹಿಸಿದರು.
“The Congress government in the state has failed to respond to the people’s problems. The traditional methods of sand mining have completely come to a halt in the district for the past several months," said MLA Vedavyas Kamath.
26-11-24 10:46 pm
Bangalore Correspondent
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
27-11-24 11:04 pm
Mangalore Correspondent
Muneer Katipalla, Mangalore, Anupam Agarwal;...
27-11-24 09:36 pm
Dr Chinnappa Gowda, Mangalore: 25 ಕೋಟಿ ವ್ಯಯಿಸ...
27-11-24 08:50 pm
Mangalore MP Captain Brijesh Chowta, Chouhan...
27-11-24 08:39 pm
Mangalore News: ಬ್ರಿಟಿಷರ ಕಾಲದ ಜಿಲ್ಲಾಧಿಕಾರಿ ಕಚ...
27-11-24 08:28 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm