ಬ್ರೇಕಿಂಗ್ ನ್ಯೂಸ್
04-11-23 11:50 am Mangalore Correspondent ಕರಾವಳಿ
ಮಂಗಳೂರು, ನ.4: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದ.ಕ. ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಮಹತ್ವದ ತೀರ್ಪು ನೀಡಿದ್ದು ಬಾಲಕಿಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿಯ ನಿವಾಸಿ ಶ್ರೀಕಾಂತ್ ಶಿಕ್ಷೆಗೊಳಗಾದ ಆರೋಪಿ.
ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯೊಂದಕ್ಕೆ ಸೇರಿದ ಶೆಡ್ ಒಂದರಲ್ಲಿ ಪರಿಶಿಷ್ಟ ವರ್ಗದ ಬಾಲಕಿ ಪೋಷಕರೊಂದಿಗೆ ವಾಸವಿದ್ದಳು. ಆರೋಪಿ ಶ್ರೀಕಾಂತ್ ಪಕ್ಕದ ಶೆಡ್‌ನಲ್ಲಿ ವಾಸವಾಗಿದ್ದ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಪ್ರೀತಿಸುವ ನೆಪದಲ್ಲಿ ಬಾಲಕಿಯ ಮನವೊಲಿಸಿ ಏಪ್ರಿಲ್ 12, 2019ರಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದರ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶಾಲೆಯಲ್ಲಿ ಅಸ್ವಸ್ಥಳಾಗಿದ್ದ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಬಳಿಕ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಪೋಲಿಸ್ ದೂರು ನೀಡಿದ್ದಳು.
ಬಜ್ಪೆ ಠಾಣೆಯಲ್ಲಿ ದಾಖಲಾಗಿದ್ದ ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಎಸಿಪಿ ಕೆ.ಯು. ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಐಪಿಸಿ ಕಲಂ 376(2) ಎನ್ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ, ಕಲಂ 376(3) ಅಡಿಯಲ್ಲಿ 20 ವರ್ಷ ಕಠಿಣ ಸಜೆ, 506 ಅಡಿಯಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದೆ. ಅಲ್ಲದೆ, ನೊಂದ ಬಾಲಕಿಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ಮಾಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದ್ದರು.
Bagalkote man sentensed to 20 years of imprisonment for rape of Dalit girl in Mangalore.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm