Deepavali and Christmas, Mangalore: ದೀಪಾವಳಿ, ಕ್ರಿಸ್ಮಸ್ ; ಮಂಗಳೂರಿನಲ್ಲಿ ರಾತ್ರಿ 10ರ ವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

04-11-23 08:19 pm       Mangalore Correspondent   ಕರಾವಳಿ

ದೀಪಾವಳಿ, ತುಳಸಿ ಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಪಟಾಕಿ ಸುಡುವುದಕ್ಕೆ ಅವಕಾಶ ನೀಡಲಾಗಿದೆ.

ಮಂಗಳೂರು, ನ.4: ದೀಪಾವಳಿ, ತುಳಸಿ ಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಪಟಾಕಿ ಸುಡುವುದಕ್ಕೆ ಅವಕಾಶ ನೀಡಲಾಗಿದೆ.  

ಹಬ್ಬಗಳ ಸಂದರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸುತ್ತಮುತ್ತಲಿನ ಹಾಗೂ ನಿಷೇಧಿತ ವಲಯದಲ್ಲಿ ಪಟಾಕಿ ಬಳಸುವಂತಿಲ್ಲ ಮತ್ತು ಮಾರಾಟ ಮಾಡುವಂತಿಲ್ಲ. ಹಸಿರು ಪಟಾಕಿಗಳ ಮೇಲೆ ಮತ್ತು ಪ್ಯಾಕೇಟ್ ಮೇಲೆ ಹಸಿರು ಪಟಾಕಿ ಚಿಹ್ನೆ ಇರುತ್ತದೆ ಹಾಗೂ ಕ್ಯೂಆರ್ ಕೋಡ ಸಹ ಇರುತ್ತದೆ ಇವು ಹಸಿರು ಪಟಾಕಿಗಳೆಂದು ಗುರುತಿಸಬಹುದು. 

ಹಬ್ಬಗಳ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯ ವರೆಗೆ ಮಾತ್ರ ಹಸಿರು (ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸುಡುಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಮಹಾನಗರಪಾಲಿಕೆಯ ಉಪ ಆಯುಕ್ತರು(ಕಂದಾಯ) ಪ್ರಕಟಣೆಯಲ್ಲಿ ತಿಳಸಿದ್ದಾರೆ.

No bursting crackers after 10pm in Mangalore for Deepavali and Christmas.