Dinesh Gundurao, Vedavyas Kamth: ಮರಳಿನ ಸಮಸ್ಯೆ ; ಶಾಸಕ ವೇದವ್ಯಾಸ್ ಪ್ರಶ್ನೆಗೆ ಉಸ್ತುವಾರಿ ಸಚಿವ ಗುಂಡೂರಾವ್ ತಿರುಗೇಟು, ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನೆ

05-11-23 08:58 pm       Mangalore Correspondent   ಕರಾವಳಿ

ಮರಳಿನ ಸಮಸ್ಯೆಗೆ ಕಾಂಗ್ರೆಸ್ ಆಡಳಿತ ಕಾರಣ ಎಂದು ದೂರಿರುವ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದು ನಿಮ್ಮ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಯಾಕೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಮಂಗಳೂರು, ನ.5: ಮರಳಿನ ಸಮಸ್ಯೆಗೆ ಕಾಂಗ್ರೆಸ್ ಆಡಳಿತ ಕಾರಣ ಎಂದು ದೂರಿರುವ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದು ನಿಮ್ಮ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಯಾಕೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಈ ಬಗ್ಗೆ ಸಚಿವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು ಶಾಸಕರಾದ ವೇದವ್ಯಾಸ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ. ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. 

Tulu as 2nd official language, report filed by Mohan Alva, let Congress  make the final decision says Mla Vedavyas Kamath in Mangalore | ತುಳು ಭಾಷೆ  ಮಾನ್ಯತೆ ; 95 ಶೇ. ಕೆಲಸ ಮುಗಿದಿದೆ, ಮೋಹನ

ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಟಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ. 

ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.

ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Dinesh Gundurao slams Vedavyas Kamath over sand dispute in Mangalore. What has double engine government done while governance in state he added.