ಬ್ರೇಕಿಂಗ್ ನ್ಯೂಸ್
13-11-20 11:49 am Udupi Correspondent ಕರಾವಳಿ
ಉಡುಪಿ, ನ.13: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳೊಂದಿಗೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸರಕಾರಿ /ಖಾಸಗಿ/ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಕೋವಿಡ್ ಮಾರ್ಗಸೂಚಿಯಡಿ ಆರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರದೊಂದಿಗೆ ಹಾಜರಾಗಬಹುದು. ತರಗತಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾಲೇಜು ಆರಂಭದ ಕನಿಷ್ಠ 3 ದಿನಗಳ ಮುಂಚೆ ಎಲ್ಲಾ ಅಧ್ಯಾಪಕರು, ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಾಲೇಜುಗಳಲ್ಲಿ ಅಧ್ಯಾಪಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್‌ಶೀಲ್ಡ್ ಧರಿಸಬೇಕು. ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಆರಂಭಿಸುವಂತಿಲ್ಲ ಎಂದು ಅವರು ಸೂಚಿಸಿದರು.
ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಜಾಗೃತಿ ಮೂಡಿಸುವ ಬ್ಯಾನರ್ ಮತ್ತು ಫಲಕಗಳನ್ನು ಅಳವಡಿಸಬೇಕು. ಕೋವಿಡ್ ನಿಯಂತ್ರಣ ಕುರಿತಂತೆ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಚನ ಪಡೆಯಬೇಕು. ಪ್ರತೀ ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆ ರಚಿಸಬೇಕು ಎಂದರು.
ಕಾಲೇಜಿಗೆ ಬರಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಪಠ್ಯಗಳನ್ನು ಆನ್‌ಲೈನ್ ಮೂಲಕ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತಂದು ಬಳಸಬೇಕು. ತಮ್ಮ ವಸ್ತುಗಳನ್ನು ಇತರೆ ವಿದ್ಯಾರ್ಥಿಗಳೊಂದಿಗೆ ಹಂಚಿ ಕೊಳ್ಳದಂತೆ ತಿಳಿಸಿದ ಜಿಲ್ಲಾಧಿಕಾರಿ, ಯಾವುದೇ ವಿದ್ಯಾರ್ಥಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಾಲೇಜು ವತಿಯಿಂದ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿ, ಪರೀಕ್ಷೆ ಮಾಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್ ವೈ., ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ ಹಾಗೂ ಜಿಲ್ಲೆಯ ವಿವಿಧ ಸರಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
PU colleges to reopen on November 17 in Udupi and students coming to college should appear with a permission letter from parents states DC Jagadeesh.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm