Ambulance, Drive, Belthangady: ಆಂಬುಲೆನ್ಸ್ ನಲ್ಲಿ ಜಾಲಿ ಡ್ರೈವ್ ; ಬೆಂಗಳೂರಿನಿಂದ ಧರ್ಮಸ್ಥಳ, ಉಡುಪಿಗೆ ಸ್ನೇಹಿತರ ಜೊತೆಗೆ ಸುತ್ತಾಟ , ಬೆಳ್ತಂಗಡಿಯಲ್ಲಿ ಆಂಬುಲೆನ್ಸ್ ಗೆ ಬ್ರೇಕ್ ಹಾಕಿ ದಂಡ ವಿಧಿಸಿದ ಪೊಲೀಸರು

11-11-23 08:48 pm       Mangalore Correspondent   ಕರಾವಳಿ

ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಬೆಳ್ತಂಗಡಿ, ನ 11:  ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತತ್ ಕ್ಷಣ ತಮ್ಮ ಠಾಣೆಯ ಸಿಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ.

ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ಫೈನ್ ಹಾಕಿದ್ದಾರೆ.

Mangalore Ambulance driver along with seven friends held at Belthangady for using vehicle for jolly trip.