ಬ್ರೇಕಿಂಗ್ ನ್ಯೂಸ್
13-11-23 10:24 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13: ಬಿಜೆಪಿ ಯುವಮೋರ್ಚಾ, ಬೆಳ್ತಂಗಡಿ ಬಿಜೆಪಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣ ವಠಾರದಲ್ಲಿ ದೀಪಾವಳಿ ಪ್ರಯುಕ್ತ 4ನೇ ವರ್ಷದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಜನರು ಸೇರಿ ವಿವಿಧ ಮಾದರಿಯ ದೋಸೆಗಳನ್ನು ಸವಿದರು.
ಇದೇ ವೇಳೆ, ಗೋವಿಗೆ ದೋಸೆಯನ್ನು ತಿನ್ನಿಸಿ ಗೋಪೂಜೆಯನ್ನೂ ಮಾಡಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೂ ನಡೆದಿದ್ದು ಆಕರ್ಷಣೆ ಪಡೆಯಿತು. ಇದೇ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಪ್ರಮುಖರಿದ್ದರು.
ಸಂಸದ ನಳಿನ್ ಕುಮಾರ್ ಮಾತನಾಡಿ, ಬೆಳ್ತಂಗಡಿಯಂತಹ ಗ್ರಾಮಾಂತರ ಭಾಗದಲ್ಲಿ ಇಂತಹ ಸಾಮೂಹಿಕ ದೀಪಾವಳಿ ಹಬ್ಬವನ್ನು ಆಯೋಜಿಸಿದ ಹರೀಶ್ ಪೂಂಜಾರವರು ಈ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಹಿಂದೂ ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಪೋಷಿಸಿಕೊಂಡು ಹೋಗುವಲ್ಲಿ ಇಂತಹ ಕಾರ್ಯಕ್ರಮಗಳು ಬಹಳ ಮಹತ್ವ ಪಡೆದಿವೆ ಎಂದರು.
ನರೇಂದ್ರ ಮೋದಿ ಈ ದೇಶಕ್ಕೆ ಪ್ರಧಾನ ಮಂತ್ರಿ ಆದ ಬಳಿಕ ಹಿಂದೂ ಸಂಸ್ಕ್ರತಿ ಬೆಳಗುತ್ತಿದೆ. ಹಲವು ಪುಣ್ಯಕ್ಷೇತ್ರಗಳು, ಪುಣ್ಯ ನದಿಗಳನ್ನು ಅಭಿವೃದ್ಧಿ ಪಡಿಸಿ ಸಾಂಸ್ಕೃತಿಕ, ಧಾರ್ಮಿಕ ಪರಂಪರೆಯನ್ನು ಮೇಲೆತ್ತಿ ಇಡೀ ವಿಶ್ವ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮುಂದಿನ ಜನವರಿಯಲ್ಲಿ ಅಯೋಧ್ಯೆಗೆ ಪ್ರಭು ಶ್ರೀರಾಮಚಂದ್ರನ ಆಗಮನವಾಗುತ್ತಿದ್ದು ಇದರೊಂದಿಗೆ ಇಡೀ ಭಾರತ ದೇಶದ ಸಂಸ್ಕೃತಿ, ಧಾರ್ಮಿಕ ಭಾವನೆ, ನಂಬಿಕೆಗಳು ಉತ್ತುಂಗಕ್ಕೆ ಹೋಗುತ್ತಿದೆ. ಇಲ್ಲಿನ ರಾಜ್ಯ ಸರ್ಕಾರ ಹಿಂದುಗಳ ಗಣಪತಿ ಹಬ್ಬಕ್ಕೆ, ದೀಪಾವಳಿಗೆ ಹಲವು ನಿರ್ಬಂಧಗಳನ್ನು ಹಾಕುವುದನ್ನು ಕಂಡಿದ್ದೇವೆ. ಇವೆಲ್ಲವನ್ನು ಹಿಂದೂ ಸಮಾಜ ಮೆಟ್ಟಿ ನಿಲ್ಲುವ ಅನಿವಾರ್ಯತೆ ಬಂದಿದೆ. ಇಂತಹ ಸಾಮೂಹಿಕ ದೀಪಾವಳಿಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರೊಂದಿಗೆ ಭಾರತೀಯ ಜನತಾ ಪಾರ್ಟಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ ಎಂದು ನಳಿನ್ ಹೇಳಿದರು.
Belthangady dosa festival held With prayer and pooja.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm