ಬ್ರೇಕಿಂಗ್ ನ್ಯೂಸ್
13-11-23 11:12 pm Mangalore Correspondent ಕರಾವಳಿ
ಮಂಗಳೂರು, ನ.14: ದಪ್ಪಗಿದ್ದೇನೆ, ನೋಡಲು ಚಂದಾ ಕಾಣ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆತ್ತವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಎಜೆ ಆಸ್ಪತ್ರೆಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪ್ರಕೃತಿ ಶೆಟ್ಟಿ ಸೋಮವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನ.16ರಂದು ಪರೀಕ್ಷೆ ಆರಂಭವಾಗುತ್ತಿದ್ದು, ಅದಕ್ಕಾಗಿ ಬೆಳಗ್ಗೆ ಬೇಗ ಎದ್ದು ಓದುತ್ತಿದ್ದರು. ಇದೇ ವೇಳೆ, ಪ್ರಕೃತಿ ಕಟ್ಟಡದಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಡೆತ್ ನೋಟ್ ನಲ್ಲಿ ತನ್ನನ್ನು ಕೆಲವರು ಗೇಲಿ ಮಾಡುತ್ತಿದ್ದಾರೆಂದು ಬರೆದಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಈಕೆಯ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ವಾಸವಿದ್ದು, ತಾಯಿ ಮನೆ ಬೈಂದೂರಿನಲ್ಲಿದೆ. ವಿಷಯ ತಿಳಿದ ಕೂಡಲೇ ಅಜ್ಜನ ಮನೆಯವರು ಬೈಂದೂರಿನಿಂದ ಮಂಗಳೂರಿಗೆ ಆಗಮಿಸಿದ್ದರು. ಅಜ್ಜಿ ಬೈಂದೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿಗೆ ಬಂದ ಹೆತ್ತವರು, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಅಷ್ಟಕ್ಕೇ ಸಾವನ್ನಪ್ಪಿದ್ದಾಳೆ ಅನ್ನುವುದನ್ನು ನಂಬುವುದಿಲ್ಲ. ಬೇರೇನಾದರೂ ಕಾರಣಗಳಿವೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking incident, the parents of an MBBS student committed suicide by writing a suicide note saying that she was fat and could not look good. As per the preliminary investigations, Prakruthi was depressed over being fat and not able to overcome it and that is why he committed suicide. died by suicide at Aj Medical college hostel building at Monday November 13.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am