Karnataka bank manager suicide in Mangalore: ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ ; ಹಿರಿಯ ಅಧಿಕಾರಿಗಳ ಕಿರುಕುಳ ಶಂಕೆ, ಮುಚ್ಚಿ ಹಾಕುತ್ತಿದ್ದಾರೆಯೇ ಪೊಲೀಸರು ?

14-11-23 01:04 pm       Mangalore Correspondent   ಕರಾವಳಿ

ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Karnataka Bank Manager Suicide, Bondel: ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಕತ್ತು ಸೀಳಿ ಸಾವು ; ಆತ್ಮಹತ್ಯೆ ಶಂಕೆ, ಬೋಂದೇಲ್ ಮನೆಯಲ್ಲಿ ಶವ ಪತ್ತೆ 

Karnataka bank manager suicide in Mangalore, senior officers harrassment reason.