ಬ್ರೇಕಿಂಗ್ ನ್ಯೂಸ್
17-11-23 01:37 pm Udupi Correspondent ಕರಾವಳಿ
ಉಡುಪಿ, ನ.17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ಸಂಭ್ರಮಿಸಿ ಪೋಸ್ಟ್ ಹಾಕಲಾಗಿದ್ದು ಈ ಕುರಿತು ಇನ್ಸ್ ಟಾ ಗ್ರಾಮ್ ಪೇಜ್ ವಿರುದ್ದ ಉಡುಪಿ ಸೈಬರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮೂಲದ ಆರೋಪಿ ಪ್ರವೀಣ್ ಚೌಗುಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೃತ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಈ ನಡುವೆ, ಕಿಡಿಗೇಡಿಗಳು ಈ ಹತ್ಯಾಕಾಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿ ಪೋಸ್ಟ್ ಮಾಡುತ್ತಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ‘ಹಿಂದು ಮಂತ್ರ’ ಎಂಬ ಪೇಜ್‌ನಲ್ಲಿ ಕೊಲೆ ಆರೋಪಿಯನ್ನು ಸಾಧನೆ ಮಾಡಿರುವಂತೆ ಬಿಂಬಿಸಿ ಪೋಸ್ಟ್ ಹಾಕಲಾಗಿದೆ. ‘ಹಿಂದು ಮಂತ್ರ’ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ‘‘15 ನಿಮಿಷದಲ್ಲಿ 4 ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಫೋಟೋಗೆ ‘ಕಿರೀಟ’ ತೊಡಿಸಿ ವಿಕೃತಿ ಮೆರೆಯಲಾಗಿದೆ.

ತಮ್ಮ ಕೃತ್ಯಕ್ಕೂ ಸಮರ್ಥನೆ ನೀಡಿರುವ ಕಿಡಿಗೇಡಿಗಳು ‘ಉಡುಪಿ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ. ಆದ್ದರಿಂದ, ನಾವೂ ಈ ವಿಚಾರಕ್ಕೆ ಬರುವುದಿಲ್ಲ’ ಎಂದು ಬರೆಯಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇದಲ್ಲದೆ ಈ ‘ಹಿಂದು ಮಂತ್ರ’ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವ ರೀತಿಯ ಫೋಟೊ, ವಿಡಿಯೋಗಳನ್ನು ಹಂಚಿಕೊಂಡು ಶಾಂತಿ ಕದಡಲು ಯತ್ನಿಸಿದ ಹಲವು ಪೋಸ್ಟ್‌ಗಳನ್ನು ಹಾಕಲಾಗಿದೆ.
Udupi murder case, Instagram page Hindu Mantra celebrates murder, case filed at cyber crime.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm