ಬ್ರೇಕಿಂಗ್ ನ್ಯೂಸ್
17-11-23 04:24 pm Udupi Correspondent ಕರಾವಳಿ
ಉಡುಪಿ, ನ.17: ಒಂದೇ ಕುಟುಂಬದ ತಾಯಿ, ಮಕ್ಕಳು ಕೊಲೆಗೀಡಾದ ಮನೆಗೆ ನೇಜಾರಿನ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದು ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕುಟುಂಬದ ಜೊತೆಗೆ ಸರಕಾರ ಇದೆಯೆಂದು ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊಲೆ ಮಾಡಿದ ಆರೋಪಿಯನ್ನು ನೋಡಿದರೆ ಸೈಕೋ ಕಿಲ್ಲರ್ ರೀತಿ ಇದ್ದಾನೆ. ಸೈಕೋ ರೀತಿ ಬಂದು ನಾಲ್ವರನ್ನು ಕೊಲೆ ಮಾಡಿ ಹೋಗಿದ್ದಾನೆ. ಉಡುಪಿ ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಇಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು ಎಂದು ಹೇಳಿದ್ದಾರೆ.
ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ. ಮೃತರ ಕುಟುಂಬದ ಜೊತೆ ಸರಕಾರ ಇದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇನೆ ಎಂದರು.
ಪ್ರದೇಶದಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆ ಮಾತನಾಡುತ್ತೇನೆ ಎಂದವರು ತಿಳಿಸಿದರು. ಇದೇ ವೇಳೆ, ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಕಾರದಿಂದ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆಯೋ ಅದನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು.
Udupi murder case, Lakshmi Hebbalkar in charge Minister visits family gives condolences. She met Noor Mohammed, the head of the family and his son Assad and other family members at their residence in Nejar. Hebbalkar The minister offered condolences to the family of Noor Mohammad. Local Congress leaders were present.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm