ಬ್ರೇಕಿಂಗ್ ನ್ಯೂಸ್
18-11-23 01:29 pm Mangalore Correspondent ಕರಾವಳಿ
ಸುಳ್ಯ, ನ.18: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಬರೆದು ಜಾಲತಾಣದಲ್ಲಿ ಹಂಚಿರುವುದು ಹಾಗೂ ಗರ್ಭಗುಡಿಯ ಫೋಟೊ ತೆಗೆದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ಪೊಲೀಸರಿಗೆ ದೂರು ನೀಡಿದ್ದಾರೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭಗುಡಿಯ ಫೋಟೋ ತೆಗೆದಿದ್ದಾರೆ. ಅಲ್ಲದೆ, ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂದನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವಧೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ತುಪ್ಪ ಕಳವು ಆಗುತ್ತಿದೆಯೆಂಬ ಆರೋಪ
ದೇವಸ್ಥಾನದಲ್ಲಿ ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಯಿಂದ ಕಾರ್ಯ ನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿಲ್ಲ, ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು ಎಂಬ ಬರಹಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ದೇಗುಲದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರಿಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.
A complaint has been registered at the Subrahmanya police station against a person for allegedly writing an abusive article about the priest of the Kukke Subrahmanya temple and sharing it on the internet and taking a photograph of the sanctum sanctorum.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm