ಬ್ರೇಕಿಂಗ್ ನ್ಯೂಸ್
18-11-23 06:14 pm Udupi Correspondent ಕರಾವಳಿ
ಉಡುಪಿ, ನ.18: ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಹಾಳು ಮಾಡುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂಥವರು ಸಚಿವರಾದರೆ ಹೀಗೆಯೇ ಆಗೋದು ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೀಕರ್ ಯುಟಿ ಖಾದರ್ ಘನತೆಯನ್ನು ಹಾಳು ಮಾಡಬೇಡಿ, ನಾವು ಮುಲ್ಲಾ ಎಂದು ಗೌರವ ನೀಡೋದಿಲ್ಲ. ಸ್ಪೀಕರ್ ಎಂಬ ಹುದ್ದೆಗೆ ಗೌರವ ನೀಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್‌ಗೆ ಮಾತಿನಿಂದಲೇ ತಿವಿದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದ ಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವೆಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ, ಹುದ್ದೆಯ ಬಗ್ಗೆ ಚರ್ಚೆ ಮಾಡಲು ಬಯಸಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಾಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಾಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ. ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲಾ ಟೀಕೆಗೆ ಉತ್ತರಿಸುತ್ತಾರೆ. ನಮ್ಮ ಕೇಂದ್ರ ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದರು.
Zameer ahmed Muslim Speaker Remark Triggers Controversy, Ct Ravi slams statement.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm