ಬ್ರೇಕಿಂಗ್ ನ್ಯೂಸ್
18-11-23 10:06 pm Mangalore Correspondent ಕರಾವಳಿ
ಮಂಗಳೂರು, ನ.18: ಸರಕಾರಿ ಶಾಲೆಯಲ್ಲೂ ಕಂಪ್ಯೂಟರ್ ಶಿಕ್ಷಣ ಸಿಗಬೇಕು, ಬಡವರ ಮಕ್ಕಳು ಕಂಪ್ಯೂಟರ್ ಶಿಕ್ಷಣದಿಂದ ಹೊರತಾಗಬಾರದು ಎಂಬ ಉದಾತ್ತ ಧ್ಯೇಯ ಇಟ್ಟುಕೊಂಡು ರಾಜ್ಯದಲ್ಲೇ ಮೊದಲ ಬಾರಿಗೆ ಅಪೂರ್ವ ಯೋಜನೆಯೊಂದನ್ನು ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನವರು ಕಾರ್ಯರೂಪಕ್ಕೆ ತಂದಿದ್ದಾರೆ. ಇದಕ್ಕಾಗಿ ಹೊಸತಾದ ಬಸ್ ಖರೀದಿಸಿ ಅದರಲ್ಲೇ ಕಂಪ್ಯೂಟರ್ ಶಿಕ್ಷಣಕ್ಕೆ ಅನುವಾಗುವಂತೆ ಹೊಸ ರೂಪ ಕೊಟ್ಟಿದ್ದಾರೆ.
ಮಂಗಳೂರಿನಲ್ಲಿ ಸೇವಾ ನಿರತವಾಗಿರುವ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ತನ್ನ ದಶಮಾನೋತ್ಸವದ ನೆನಪಿಗೆ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನೂತನ ತಂತ್ರಜ್ಞಾನದ ಡಿಜಿಟಲ್ ಬಸ್ ಸೇವೆ ಮಾಡಿದ್ದು, ಶನಿವಾರ ಈ ಹೊಸ ವ್ಯವಸ್ಥೆಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಚಾಲನೆ ನೀಡಿದ್ದಾರೆ.




"ಕ್ಲಾಸ್ ಆನ್ ವ್ಹೀಲ್ಸ್" ಎಂಬ ಹೆಸರಿನ ಐಷಾರಾಮಿ ಹವಾನಿಯಂತ್ರಿತ ಬಸ್ಸಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಗಳಿಗೆ ಸಂಚರಿಸಿ, ಅಲ್ಲಿಯೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಗುರಿ ಹೊಂದಿದೆ. ಇದಕ್ಕಾಗಿ ಬಸ್ಸಿನ ಒಳಗಡೆಯೇ ತರಗತಿ ವ್ಯವಸ್ಥೆ ಮಾಡಿದ್ದು, 16 ಲ್ಯಾಪ್ ಟಾಪ್ ಗಳನ್ನು ಇರಿಸಲಾಗಿದೆ. ಆರು ಮತ್ತು ಏಳನೇ ತರಗತಿಯ ಮಕ್ಕಳಿಗೆ ವಾರದಲ್ಲಿ ಒಂದು ಗಂಟೆಯಂತೆ ತರಗತಿ ಇರಲಿದೆ. ಇದಕ್ಕಾಗಿ ನುರಿತ ಶಿಕ್ಷಕರು ಜೊತೆಯಲ್ಲಿ ಇರಲಿದ್ದಾರೆ. ವಾರ್ಷಿಕ ಐದು ಸಾವಿರ ಮಕ್ಕಳಿಗೆ ಕಂಪ್ಯೂಟರ್ ಬೇಸಿಕ್ ಶಿಕ್ಷಣ ನೀಡುವ ಗುರಿಯನ್ನು ಈ ಡಿಜಿಟಲ್ ಬಸ್ ಹೊಂದಿದೆ.


ಡಿಜಿಟಲ್ ಬಸ್ಸಿನಲ್ಲಿ ಏನೇನಿದೆ ಗೊತ್ತಾ?
ಸಂಪೂರ್ಣ ಹವಾನಿಯಂತ್ರಿತ ಆಗಿರುವ ಡಿಜಿಟಲ್ ಬಸ್ಸಿನಲ್ಲಿ ಏಕಕಾಲದಲ್ಲಿ ತಲಾ ಒಬ್ಬರಂತೆ 16 ಅಥವಾ ಇಬ್ಬರಂತೆ 32 ವಿದ್ಯಾರ್ಥಿಗಳಿಗೆ ಕಲಿಯಲು 16 ಲ್ಯಾಪ್ ಟಾಪ್ ಕಂಪ್ಯೂಟರ್ ವ್ಯವಸ್ಥೆ ಇದೆ. ಶಿಕ್ಷಕರಿಗೆ ಪ್ರತ್ಯೇಕ ಕಂಪ್ಯೂಟರ್, ಚೆಯರ್, ಡೆಸ್ಕ್ ನಿರ್ಮಿಸಲಾಗಿದೆ. ಕಾನ್ಫರೆನ್ಸ್ ಗೆ ಪ್ರಾಜೆಕ್ಟರ್, ಪ್ರಸೆಂಟೇಶನ್ ಗೆ ಟಿವಿ, ಮ್ಯೂಸಿಕ್ ಸಿಸ್ಟಮ್ ವ್ಯವಸ್ಥೆ, ಮೈಕ್ ಸೌಂಡ್ ಸಿಸ್ಟಮ್, ಲೈಟಿಂಗ್ಸ್, ಎಲ್ಇಡಿ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ. ಇಂಟರ್ನೆಟ್ ಸಂಪರ್ಕಕ್ಕಾಗಿ ವೈಫೈ ಇರುತ್ತದೆ. ಅಲ್ಲದೆ, ವಿದ್ಯಾರ್ಥಿಗಳ, ಶಿಕ್ಷಕರ ಹಾಜರಾತಿಗೆ ಬಸ್ ಬಾಗಿಲ ಬಳಿ ಅತ್ಯಾಧುನಿಕ ಬಯೋಮೆಟ್ರಿಕ್ ಡಿವೈಸ್ ಸ್ಥಾಪಿಸಲಾಗಿದೆ. ಇತರ ಸಮಯಗಳಲ್ಲಿ 25 ಜನರ ಸಭೆಗಳನ್ನು ಬಸ್ಸಿನೊಳಗೆ ಎಲ್ಲಿ ಬೇಕಾದರೂ ಮಾಡುವಂತಹ ಮಲ್ಟಿ ಸ್ಪೆಶಾಲಿಟಿ ವ್ಯವಸ್ಥೆ ಇದೆ. ತರಗತಿ ಒಳ ಹೋಗಲು ಮೂರು ಪ್ರವೇಶ ದ್ವಾರಗಳಿವೆ. ಮಕ್ಕಳ ಸುರಕ್ಷತೆ ಗಾಗಿ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಲಾಗಿದೆ.
ಡಿಜಿಟಲ್ ಬಸ್ ಕನಸು ಕಂಡಿದ್ದು ಹೇಗೆ?
ಈ ಬಸ್ಸನ್ನು ದಾನ ನೀಡಿದ್ದು ಎಂ ಫ್ರೆಂಡ್ಸ್ ಗ್ರೂಪಿನ ಸದಸ್ಯ ಹನೀಫ್ ಪುತ್ತೂರು. ಇವರು ದುಬೈನಲ್ಲಿ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಕ್ಲೌಡ್ & ಇನ್ಫ್ರಾ ಸ್ಟ್ರೆಕ್ಚರ್ ಮೆನೇಜರ್ ಆಗಿ ಉದ್ಯೋಗದಲ್ಲಿದ್ದಾರೆ. ಜೊತೆಗೆ, ಯುಎಇ ಗೋಲ್ಡನ್ ವೀಸಾ ಹೊಂದಿದ್ದಾರೆ. ಸುಲಭದಲ್ಲಿ ಜನಸಾಮಾನ್ಯರಿಗೆ ಯಾವ ರೀತಿಯ ಸೇವೆ ನೀಡಬಹುದು ಎಂಬ ನೆಲೆಯಲ್ಲಿ ಅಬುಧಾಬಿಯ ಕಂಪನಿ ಸ್ಪರ್ಧೆ ಹಮ್ಮಿಕೊಂಡಿತ್ತು. ಅದರಲ್ಲಿ ಪಾಲ್ಗೊಂಡಿದ್ದ ಹನೀಫ್ ಅವರು, ಗ್ರಾಮೀಣ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಕಂಪ್ಯೂಟರ್ ಬಸ್ ಪ್ರಾರಂಭಿಸುವ ಯೋಜನೆ ಮಂಡಿಸಿದ್ದರು. ಹನೀಫ್ ಪ್ರಸ್ತುತಪಡಿಸಿದ್ದ ಡಿಜಿಟಲ್ ಬಸ್ ಮಾದರಿಯ ಕಲ್ಪನೆಗೆ ಲಕ್ಷಾಂತರ ಜನರು ಆನ್ಲೈನ್ ವೋಟ್ ಮಾಡಿದ್ದು ಆಮೂಲಕ ಅವರನ್ನು ವಿಜೇತರನ್ನಾಗಿಸಿದ್ದರು. ಅದರಲ್ಲಿ ದೊರೆತ 50 ಲಕ್ಷ ಬಹುಮಾನದ ಮೊತ್ತಕ್ಕೆ ತನ್ನಿಂದ ಹತ್ತು ಲಕ್ಷ ಸೇರಿಸಿ ಹೊಸ ಮಾದರಿಯ ಬಸ್ಸನ್ನು ನೀಡಿದ್ದಾರೆ. ಹೆಚ್ಚುವರಿ ಖರ್ಚನ್ನು ಎಂ ಫ್ರೆಂಡ್ಸ್ ಟ್ರಸ್ಟ್ ಭರಿಸಿದ್ದು, ಟಾಟಾ ಕಂಪನಿಯ ಬಸ್ಸನ್ನು ಕಂಪ್ಯೂಟರ್ ಕ್ಲಾಸ್ ರೂಮ್ ಆಗಿ ಬೈಕಂಪಾಡಿಯ ರೋಡ್ರಿಕ್ಸ್ ಇಂಡಸ್ಟ್ರೀಸ್ ರೂಪಿಸಿದ್ದಾರೆ.
ಜಿಲ್ಲೆಯಾದ್ಯಂತ ಸಂಚಾರ, ಪ್ರತಿದಿನ ಕ್ಲಾಸು
ಬಸ್ ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ಗ್ರಾಮೀಣ ವಿದ್ಯಾಸಂಸ್ಥೆಗಳಿಗೆ ತೆರಳಿ ಶಾಲಾ ಆವರಣದಲ್ಲೇ ಕಂಪ್ಯೂಟರ್ ಶಿಕ್ಷಣ ನೀಡಲಿದೆ. ಒಂದು ವಿದ್ಯಾರ್ಥಿಗೆ ಕನಿಷ್ಠ 15 ರಿಂದ 20 ತಾಸುಗಳ ತರಬೇತಿ ನೀಡಲಿದೆ. ದಿನದಲ್ಲಿ ಮೂರು ಅಥವಾ ನಾಲ್ಕು ಶಾಲೆಗಳಿಗೆ ತೆರಳಿ ತಲಾ ಒಂದರಿಂದ ಒಂದೂವರೆ ತಾಸಿನ ತರಗತಿ ನೀಡಲಿದೆ. ಇದಕ್ಕಾಗಿಯೇ ಪ್ರತ್ಯೇಕ ಸಿಲೆಬಸ್ ರಚಿಸಲಾಗಿದೆ. ಬಸ್ ನಲ್ಲಿ ಇಬ್ಬರು ಕಂಪ್ಯೂಟರ್ ಶಿಕ್ಷಕಿಯರು, ಅನುಭವಿ ಚಾಲಕ ಮತ್ತು ನಿರ್ವಾಹಕರು ಇರುತ್ತಾರೆ. ಸರಕಾರಿ ರಜೆ ಹೊರತುಪಡಿಸಿ ಬೆಳಿಗ್ಗೆ 9 ರಿಂದ ಸಂಜೆ 4 ರ ತನಕ ಡಿಜಿಟಲ್ ಬಸ್ ಕಾರ್ಯಾಚರಿಸಲಿದೆ. ಈ ಯೋಜನೆಗೆ ವಾರ್ಷಿಕ 10 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ ಎಂದು ಟ್ರಸ್ಟಿನ ಪ್ರಮುಖರಾದ ರಶೀದ್ ವಿಟ್ಲ ತಿಳಿಸಿದ್ದಾರೆ. ಮಂಗಳೂರಿನ ಜಪ್ಪು ಸೆಂಟಿನರಿ ಶಾಲೆಯ ಆವರಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆದಿದ್ದು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉದ್ಯಮಿ ರೋಹನ್ ಮೊಂತೇರೊ, ಹಿರಿಯ ವಕೀಲ ಪದ್ಮರಾಜ್, ಎಂ ಫ್ರೆಂಡ್ಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
M Friends Charitable Trust launch Class on Wheels to offer computer education in Mangalore. Mr. Vitla said the trust would start with computer education for students of the Government Higher Primary School at Kunjuru Panja and nine other government higher primary schools in Puttur taluk. “We have plans to extend this facility to other government higher primary schools,” Mr. Vitla said
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm