ಬ್ರೇಕಿಂಗ್ ನ್ಯೂಸ್
22-11-23 02:26 pm Mangalore Correspondent ಕರಾವಳಿ
ಮಂಗಳೂರು, ನ.22: ಬೆಳಗಾವಿ ಅಧಿವೇಶನ ಬಳಿಕ ಕಾಂಗ್ರೆಸ್‌ನಲ್ಲಿ ದೊಡ್ಡ ಪರಿವರ್ತನೆಯಾಗಲಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್‌ನಿಂದ ಹೊರಗೆ ಬರುತ್ತಾರೆ ಎಂದು ಬಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, " ಕಾಂಗ್ರೆಸ್‌ನೊಳಗೆ ಆಂತರಿಕ ಗೊಂದಲ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಮತ್ತು ಜಾರಕಿಹೊಳಿ ತಂಡ ಪ್ರತ್ಯೇಕವಾಗಿ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿಯಾಗುವ ಬೇಡಿಕೆ ಇಡುತ್ತಿದಾರೆ. ಕಾಂಗ್ರೆಸ್ ಡಿವೈಡ್ ಆಗುತ್ತಿದ್ದು ಹಸ್ತದೊಳಗೆ ಹಸ್ತದ ಆಪರೇಷನ್ ಆಗುತ್ತಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ನ 30-40 ಶಾಸಕರು ಬಿಜೆಪಿಗೆ ಬರಲಿದ್ದಾರೆ. ಇದೇ ಭಯದಿಂದ ಕಾಂಗ್ರೆಸ್‌ನವರು ಬಿಜೆಪಿಯಿಂದ ಬರುತ್ತಿದ್ದಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಕಾಂಗ್ರೆಸ್‌ನಲ್ಲಿ ದೊಡ್ಡ ಪರಿವರ್ತನೆಯಾಗುತ್ತದೆ. ಸಿಎಂ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹಾಕುತ್ತಿದ್ದಾರೆ. ಇತ್ತ ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಸಿಎಂ ಸ್ಥಾನಕ್ಕೆ ಮುಗಿಬಿದ್ದಿದ್ದಾರೆ. ಈ ಕಾರಣ ಸರ್ಕಾರ ಬೀಳಬಹುದು ಎಂದರು.
ಸರ್ಕಾರದಿಂದ ಅಭಿವೃದ್ಧಿ ಆಗುತ್ತಿಲ್ಲ ;
ರಾಜ್ಯ ಸರ್ಕಾರ ಟೇಕಾಫ್ ಆಗುತ್ತಿಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ. ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದ್ರೂ ಬಂಧನವಾಗುತ್ತಿಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ ಎಂದು ಕಿಡಿಕಾರಿದರು.
ಮೋದಿ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ ;
ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ. ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣವಿಲ್ಲ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
30 to 40MLAs to leave Congress very soon says MP Nalin Kumar Kateel in Mangalore. Internal tussle has increased in the Congress. The groups of Siddaramaiah, D K Shivakumar and Satish Jarkiholi are getting divided. Around 30 to 40 MLAs will desert the Congress within a few days,” said MP Nalin Kumar Kateel.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm