ಬ್ರೇಕಿಂಗ್ ನ್ಯೂಸ್
22-11-23 04:26 pm Mangaluru Correspondent ಕರಾವಳಿ
ಮಂಗಳೂರು, ನ.21: ಜಮೀರ್ ಅಹಮ್ಮದ್ ನನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರೋದೇ ಹೆಚ್ಚು. ಸ್ಪೀಕರ್ ಸ್ಥಾನಕ್ಕೆ ಜಾತಿ ಧರ್ಮದ ಬಣ ಹಚ್ಚುತ್ತಾರೆ, ತಲೆ ತಗ್ಗಿಸುವ ಕೆಲಸ ಮಾಡಿದ ಇವರನ್ನು ಇಷ್ಟೋತ್ತಿಗೆ ಮುಖ್ಯಮಂತ್ರಿ ಅವರೇ ರಾಜೀನಾಮೆ ತೆಗೆದುಕೊಳ್ಳಬೇಕಿತ್ತು. ಈ ಮನುಷ್ಯ ಮುಂದಿನ ಅಧಿವೇಶನದಲ್ಲಿ ಹೇಗೆ ಭಾಗವಹಿಸುತ್ತಾರೆ ನೋಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ವಿಜಯೇಂದ್ರ ಅವರು, ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿದ್ದಾರೆ. ಜಮೀರ್ ಅಹ್ಮದ್ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ನಾವು ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಕೇವಲ ಆರು ತಿಂಗಳಿಗೆ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಇದ್ರೆ ಕಾಂಗ್ರೆಸ್ ಸರ್ಕಾರ. ರೈತ ವಿರೋಧಿ, ಬಡವರ ವಿರೋಧಿ, ದಲಿತರ ವಿರೋಧಿ ಸರ್ಕಾರ ಇದಾಗಿದೆ. ಭೀಕರ ಬರಗಾಲ ಇದ್ರೂ, ನಿಭಾಯಿಸಲು ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಿಲ್ಲ, ಅಧಿಕಾರಿಗಳ ಸಭೆ ಕೂಡ ಕರೆದಿಲ್ಲ. ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಬರದ ವಿಚಾರ ಮಾತಾಡಿಲ್ಲ. ಲೋಕಸಭಾ ಚುನಾವಣೆ ಗೆಲ್ಲುವ ಚರ್ಚೆ ಮಾಡಿದ್ದಾರೆ. ರೈತರು ಪರದಾಡುವ ಸಂದರ್ಭದಲ್ಲಿ ಬೋರ್ಡ್ ಚುನಾವಣೆ ಬಗ್ಗೆ ಮಾತಾಡುತ್ತಾರೆ.
ಬಿಜೆಪಿ ಸರಿಯಾದ ರೀತಿಯಲ್ಲಿ ವಿದ್ಯುತ್ ನೀಡುತ್ತಿತ್ತು. ಈಗ ವಿದ್ಯುತ್ ಅಭಾವ ಸೃಷ್ಟಿಯಾಗಿ ಎರಡು ತಾಸು ವಿದ್ಯುತ್ ಸಿಗ್ತಾ ಇಲ್ಲ, ವಿದ್ಯುತ್ ಕಣ್ಣಾಮುಚ್ಚಾಳೆ ಉಂಟಾಗಿದೆ. ಸರ್ಕಾರ ಬಂದು ಆರು ತಿಂಗಳು ಆದ್ರೂ ಮೋಜಿನಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ಜವಾಬ್ದಾರಿ ಮರೆತಿದೆ. ಮುಂದೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದರು.
ನಾವೆಲ್ಲರೂ ಒಗಟ್ಟಾಗಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ 28 ಲೋಕಸಭಾ ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ ವಿಜಯೇಂದ್ರ, ಹಿಂದೆ ಏನಾಗಿದೆ ಅನ್ನೋದು ಬಿಡಿ, ಮುಂದೆ ಯಾರೂ ಪಕ್ಷ ಬಿಡೋದಿಲ್ಲ. ಯಾವ ಮುಖಂಡರು, ಕಾರ್ಯಕರ್ತರೂ ಪಕ್ಷ ಬಿಟ್ಟು ಹೋಗೋದಿಲ್ಲ. ಈಗಾಗಲೇ ಪಕ್ಷ ಬಿಟ್ಟು ಹೋಗಿರೋರನ್ನು ಮರಳಿ ಕರೆತರುತ್ತೇವೆ. ಲಕ್ಷಣ್ ಸವದಿಯನ್ನು ನಾವಿನ್ನೂ ಪಕ್ಷಕ್ಕೆ ಕರೆದೇ ಇಲ್ಲ. ಯಾರೋ ಒಬ್ಬರು ಪಕ್ಷ ಬಿಟ್ಟು ಹೋದಾಕ್ಷಣ ಪಕ್ಷಕ್ಕೆ ಹಿನ್ನಡೆಯಾಗಲ್ಲ. ಜಾತಿ ಗಣತಿಗೆ ನಮ್ಮ ವಿರೋಧ ಇಲ್ಲ, ಆದರೆ ಅದನ್ನು ರಾಜಕೀಯಕ್ಕೆ ಉಪಯೋಗ ಮಾಡಬಾರದು ಎಂದರು.
Vijayendra demands resignation of Zameer Khan over conduct, remarks in Mangalore. Karnataka BJP President B Y Vijayendra on Monday demanded that Chief Minister Siddaramaiah seek the resignation of Ministers Priyank Kharge and Zameer Ahmed Khan for their recent conduct and remarks that allegedly undermined the office they hold.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am