ಬ್ರೇಕಿಂಗ್ ನ್ಯೂಸ್
23-11-23 09:49 pm Mangalore Correspondent ಕರಾವಳಿ
ಮಂಗಳೂರು, ನ.23: ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಿಂದ ದುಬೈನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವ ತೋರಿದ್ದಾರೆ.
ಹರೇಕಳ ಹಾಜಬ್ಬ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯಾ ವಿಮಾನದ ಸಿಬ್ಬಂದಿ ಕ್ಯಾಪ್ಟನ್ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, "ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದು ಹೇಳಿದ್ದಾರೆ.


ಇದರ ವಿಡಿಯೋವನ್ನು ಸಹ ಪ್ರಯಾಣಿಕರು ಚಿತ್ರೀಕರಿಸಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ. ಹಾಜಬ್ಬ ಅವರು ತಮ್ಮ ಎಂದಿನ ಶೈಲಿಯಲ್ಲಿ ಕೈಮುಗಿದು ವಿಧೇಯತೆ ತೋರಿದ್ದಾರೆ. ವಿಮಾನ ಸಿಬಂದಿ ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ. ಈ ವೇಳೆ, ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಹಾಜಬ್ಬರ ಜೊತೆಗಿದ್ದರು.
Padma Shri recipient Harekala Hajabba, more known as ‘Akshara Santha’, was honoured and praised by the staff of Air India Express onboard a flight to Dammam to partake in a programme organized by Hidaya Foundation, Jubail unit.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm