ಬ್ರೇಕಿಂಗ್ ನ್ಯೂಸ್
24-11-23 02:56 pm Mangalore Correspondent ಕರಾವಳಿ
ಮಂಗಳೂರು, ನ.24: ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ವಾಪಸ್ ಪಡೆದ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಮಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಅಡ್ವೊಕೇಟ್ ಜನರಲ್ ಗೆ ಕಳೆದ ಬಾರಿ ಯಡಿಯೂರಪ್ಪ ಸರ್ಕಾರ ಇದ್ದಾಗ ಮೌಖಿಕ ಆದೇಶ ಕೊಟ್ಟಿದ್ದರು. ಮೌಖಿಕ ಆದೇಶ ಕೊಡೋದು ತಪ್ಪು ಅನ್ನೋದು ಆಗಿನ ಎಜಿ ಮತ್ತು ಈಗಿನ ಎಜಿ ಶಶಿಕಿರಣ್ ಶೆಟ್ಟಿ ಅಭಿಪ್ರಾಯ. ಆ ಪ್ರಕಾರ ಈಗ ಕೊಟ್ಟ ಅನುಮತಿಯನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಸಿಬಿಐ ಸುಪ್ರೀಂ ಅಥವಾ ಹೈಕೋರ್ಟ್ ಹೋಗೋದು ಅವರಿಗೆ ಬಿಟ್ಟಿದ್ದು. ಆಗಿನ ಸರ್ಕಾರ ಮಾಡಿರೋದು ತಪ್ಪು ಅಂತ ಎಜಿ ವರದಿ ಕೊಟ್ಟಿದ್ದಾರೆ. ಹೀಗಾಗಿ ಕ್ಯಾಬಿನೆಟ್ ಗೂ ಅದು ತಪ್ಪು ಅಂತ ಅನಿಸಿ ವಾಪಸ್ ತೆಗೊಂಡಿದೆ. ಬಿಜೆಪಿಯವರು ಪ್ರಾಮಾಣಿಕರಾಗಿದ್ದರೆ ಎಜಿ ಅಭಿಪ್ರಾಯ ಕೇಳಿ ತನಿಖೆಗೆ ಕೊಡಬೇಕಿತ್ತು. ಎಜಿ ಅಭಿಪ್ರಾಯ ಕೊಡುವ ಮೊದಲೇ ಆಗಿನ ಸಿಎಂ ಸಿಬಿಐ ಕೊಟ್ಟಿದ್ದು ತಪ್ಪಲ್ವಾ? ಅವರು ಪ್ರಾಮಾಣಿಕರಾಗಿದ್ರೆ ಎಜಿ ಕೇಳಿ ಕೊಡಬೇಕಿತ್ತು.
ನಮ್ಮ ಪ್ರಾಮಾಣಿಕತೆ ಪ್ರಶ್ನೆ ಮಾಡೋ ಇವರು ಎಜಿ ಸಲಹೆ ಕೇಳಬೇಕಿತ್ತು. ಈಗಿನ ಎಜಿ ಅದು ತಪ್ಪು ಅಂದ ಕಾರಣಕ್ಕೆ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಂಡಿದೆ ಎಂದರು.
ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಗೆ ಯಾರು ಬರ್ತಾರೆ, ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ. ವಿಜಯೇಂದ್ರ ಅಥವಾ ಯಾವುದೇ ವ್ಯಕ್ತಿಯಿಂದ ಪಕ್ಷದಲ್ಲಿ ಬದಲಾವಣೆ ಆಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬರೋರ ಸಂಖ್ಯೆ ಹೆಚ್ಚಾಗಲಿದೆ, ಸರ್ಕಾರ ಸರಿಯಾದ ದಾರಿಯಲ್ಲಿದೆ. ಸೋಮಣ್ಣ ವಿಚಾರದಲ್ಲಿ ಮಾತುಕತೆ ಆಗ್ತಿದೆ, ಏನಾಗಿದೆ ಗೊತ್ತಿಲ್ಲ ಎಂದರು.
ಜಾತಿ ಗಣತಿ ಅನ್ನೋದು ಯಾರದ್ದೇ ಜಾತಿ ಎತ್ತಿ ತೋರಿಸೋ ಉದ್ದೇಶ ಅಲ್ಲ. ಆಯಾ ಜಾತಿಗಳ ಆರ್ಥಿಕ ಸ್ಥಿತಿಗತಿ ತಿಳಿಯೋ ಉದ್ದೇಶ. ಅವರನ್ನು ಮೇಲೆ ಎತ್ತೋದೇ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸಮಾಜದಲ್ಲಿ ಮೇಲೆ ಎತ್ತೋ ಉದ್ದೇಶ ಜಾತಿ ಗಣತಿಯದ್ದು. ಸಿಎಂ, ಡಿಸಿಎಂ ಮಧ್ಯೆ ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಾತಿ ಗಣತಿ ವರದಿ ತೆಗೊಂಡು ಸಾಧಕ ಬಾಧಕ ನೋಡಿ ಸರ್ಕಾರ ಅನುಮೋದನೆ ನೀಡಲಿದೆ ಎಂದರು.
Urban Development Minister Byrathi Suresh has reacted to the cabinet's decision to withdraw from the CBI probe into the disproportionate assets case against Deputy Chief Minister DK Shivakumar. He had given an oral order to the Advocate General in this regard last time when the Yediyurappa government was in power.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm