ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್‍ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್‍ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್‍ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್‍ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್‍ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್‍ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm