ಬ್ರೇಕಿಂಗ್ ನ್ಯೂಸ್
24-11-23 10:26 pm Mangalore Correspondent ಕರಾವಳಿ
ಮಂಗಳೂರು, ನ.24: ಮಂಗಳೂರು ನಗರದಲ್ಲಿ ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರ ಮೂಡುಬಿದ್ರೆ ನಿವಾಸದಲ್ಲಿ ಶುಕ್ರವಾರದ ಬೆಳಗ್ಗಿನ ಉಪಹಾರ ಏರ್ಪಡಿಸಲಾಗಿತ್ತು. ಆದರೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ಚಹಾಕೂಟವನ್ನೇ ರದ್ದುಪಡಿಸಿದ ಪ್ರಸಂಗ ನಡೆದಿದೆ.
ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ್ದರು. ಇವರಿಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಮೋಹನ್ ಆಳ್ವಾ ನಿವಾಸದಲ್ಲಿ ಬೆಳಗ್ಗಿನ ಉಪಾಹಾರ ಕೂಟ ಏರ್ಪಡಿಸಲಾಗಿತ್ತು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಅವರ ಉಮೇದುವಾರಿಕೆ ಸಲ್ಲಿಸುವಾಗಲೂ ಜೊತೆಯಾಗಿದ್ದ ಡಾ. ಮೋಹನ್ ಆಳ್ವರ ನಿವಾಸದಲ್ಲಿ ಸಚಿವರು ಉಪಹಾರ ಕೂಟದಲ್ಲಿ ಪಾಲ್ಗೊಳ್ಳುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ನೇರವಾಗಿ ಬಿಜೆಪಿಯನ್ನು ಬೆಂಬಲಿಸಿದವರ ಮನೆಗೆ ಸಚಿವರು ಹೋಗುವುದು ಸರಿಯಲ್ಲ ಎಂಬ ಅಭಿಪ್ರಾಯ ಕಾರ್ಯಕರ್ತರಿಂದ ಬಂದಿತ್ತು. ಬಿಜೆಪಿ ಬೆಂಬಲಿಗರ ನಿವಾಸದಲ್ಲಿ ಉಪಾಹಾರ ಕೂಟ ಏರ್ಪಡಿಸುವುದಕ್ಕೆ ನಮ್ಮ ವಿರೋಧವಿದೆ ಎಂದು ಕೈ ಕಾರ್ಯಕರ್ತರು ಪಕ್ಷದ ಮುಖಂಡರಲ್ಲಿ ಅಸಾಮಾಧಾನ ಹೇಳಿಕೊಂಡಿದ್ದರು. ಜೊತೆಗೆ ಸಚಿವರ ಕಾರ್ಯಕ್ರಮದಲ್ಲಿ ಭಾಗವಹಿಸದೇ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬೆಳಗ್ಗೆ ತರಾತುರಿಯಲ್ಲಿ ಡಾ.ಮೋಹನ್ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಾಹಾರ ಕೂಟವನ್ನು ರದ್ದುಗೊಳಿಸಲಾಗಿದೆ ಎನ್ನುವ ಮಾಹಿತಿಯಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
Mangalore Byrathi Suresh cancles breakfast at Mohan alva house after congress members turn anger.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm