ಬ್ರೇಕಿಂಗ್ ನ್ಯೂಸ್
24-11-23 10:46 pm Mangalore Correspondent ಕರಾವಳಿ
ಮಂಗಳೂರು, ನ.24: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ತನ್ನ ವ್ಯಾಪ್ತಿಯ ಐದು ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ, ವಿಳಂಬದ ಬಗ್ಗೆ ಪ್ರಶ್ನಿಸಿ ಅಧಿಕಾರಿಗಳ ಬೆವರಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ಎತ್ತಿ ತೋರಿಸಿ ಸಮರ್ಪಕ ಉತ್ತರ ನೀಡದ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದಾರೆ. ಅಲ್ಲದೆ, ಕೆಲವು ಕಾಮಗಾರಿಗಳಿಗೆ ಹೆಚ್ಚುವರಿ ಹಣ ಖರ್ಚು ಮಾಡಿದ್ದಾರೆಂದು ಅವುಗಳಿಗೆ ತಡೆ ನೀಡಿದ್ದಾರೆ.
ಎರಡು ಕಿಮೀ ವಾಕಿಂಗ್ ಪಾತ್ ನಿರ್ಮಿಸುವುದಕ್ಕೆ 70 ಕೋಟಿ ಖರ್ಚು ಮಾಡುತ್ತಿರುವ ವಿಚಾರ ಕೇಳಿದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಒಂದು ರಸ್ತೆಗೆ ಇಷ್ಟೊಂದು ಖರ್ಚು ಅಗತ್ಯ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಹ್ಯಾಂಗಿಂಗ್ ಬ್ರಿಡ್ಜ್ ಹಾಗೂ ಬೋಳೂರಿಬ ದ್ವೀಪದಲ್ಲಿ ಓಪನ್ ಥಿಯೇಟರ್ ಸೇರಿದಂತೆ ಬೇಕಾಬಿಟ್ಟಿ ಖರ್ಚು ತೋರುವ ಕಾಮಗಾರಿಗಳಿಗೆ ತಡೆ ನೀಡಿದ್ದಾರೆ. ಕೆಲವು ಕಾಮಗಾರಿಗಳಿಗೆ ಟೆಂಡರ್ ಕರೆಯದೇ ಹಂಚಿಕೆ ಮಾಡಿದ್ದನ್ನು ಪ್ರಶ್ನಿಸಿ, ಕೆಯುಐಡಿಎಫ್ ಸಿ ಇಲಾಖೆಯ ಚೀಫ್ ಇಂಜೀನಿಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಬೆದರಿದ, ನಿವೃತ್ತಿಯಾಗಿದ್ದರೂ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮುಂದುವರಿಸಿದ್ದ KUIDFC ಚೀಫ್ ಇಂಜೀನಿರ್ ಜಯರಾಮ್ ರಾಜೀನಾಮೆ ನೀಡುತ್ತೇನೆಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಸಿಟ್ಟಾದ ಸಚಿವ ಭೈರತಿ ಸುರೇಶ್, ಗೆಟ್ ಔಟ್ ಫ್ರಂ ಹಿಯರ್ ಎಂದಿದ್ದಾರೆ. ಜಯರಾಂ ಸಭೆಯಿಂದ ಎದ್ದು ಹೊರ ಹೋಗಿದ್ದಾರೆ.
ಪರಿಶೀಲನಾ ಸಭೆಯ ಬಳಿಕ ಸಚಿವ ಬೈರತಿ ಸುರೇಶ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಸ್ಮಾರ್ಟ್ ಸಿಟಿ ಸೇರಿದಂತೆ ಐದು ಇಲಾಖೆ ನನ್ನ ವ್ಯಾಪ್ತಿಯಲ್ಲಿದೆ. ಎಲ್ಲಾ ಇಲಾಕೆಯ ಪ್ರಗತಿ ಪರಿಶೀಲನೆ ಮಾಡಿದ್ದೇನೆ. ಸ್ಮಾರ್ಟ್ ಸಿಟಿಯಲ್ಲಿ ಅಷ್ಟು ದೊಡ್ಡ ಸಮಸ್ಯೆ ಇಲ್ಲ. ಎರಡು ಪ್ರಪೋಸಲ್ ಬದಲಾಯಿಸಲು ಸೂಚಿಸಿದ್ದೇನೆ. ಕೆಲವು ಕಾಮಗಾರಿಗಳು ವಿಳಂಬವಾಗಿದ್ದು ಇನ್ನೂ ಹೆಚ್ಚಿನ ಅನುದಾನ ಬೇಕಿದೆ. ಹಾಗೇ ಬೇರೆ ಬೇರೆ ಇಲಾಖೆಯಲ್ಲೂ ಸಮಸ್ಯೆ ಇದೆ. ಸರ್ಕಾರದಿಂದ ಲೇ ಔಟ್ ಮಾಡಲು ಮೂಡಾಕ್ಕೆ ಸೂಚಿಸಿದ್ದೇನೆ. ಬಿ ಖಾತೆ ಮಾಡುವ ವಿಚಾರದಲ್ಲಿ ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳುತ್ತೇನೆ. ಬಿ ಖಾತೆಯಿಂದ ಜನರಿಗೆ ಅನುಕೂಲ ಆಗಲಿದೆ. ವಲಯ ವಿಂಗಡಣೆಯನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣ ಗೊಳಿಸಲಾಗುವುದು ಎಂದಿದ್ದಾರೆ.
ವಾಕಿಂಗ್ ಪಾತ್ ನಿರ್ಮಾಣದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, 2 ಕಿಲೋ ಮೀಟರ್ ರಸ್ತೆಗೆ 70 ಕೋಟಿ ಯಾಕೆ ಬೇಕು ? 70 ಕೋಟಿ ಸಣ್ಣ ಮೊತ್ತ ಅಲ್ಲ. ಹಾಗಾಗಿ ಕಾಮಗಾರಿ ನಿಲ್ಲಿಸಲು ಹೇಳಿದ್ದೇನೆ. ತಾತ್ಕಾಲಿಕವಾಗಿ ತಡೆ ಹಿಡಿಯಲು ಹೇಳಿದ್ದೇನೆ. ಅದು ಯಾಕೆ ಅಷ್ಟು ಹಣ ವಿನಿಯೋಗ ಮಾಡ್ತಾರೆ ಅನ್ನೋದು ಗೊತ್ತಾಗಿಲ್ಲ. ಜನರ ಹಣ ಹಾಳಾಗಬಾರದು ಎಂದು ಕ್ರಮ ಅಷ್ಟೇ. ಪರಿಶೀಲನೆ ಬಳಿಕ ಅಗತ್ಯಕ್ಕೆ ತಕ್ಕಂತೆ ಕಾಮಗಾರಿ ಮುಂದುವರೆಯುತ್ತದೆ ಎಂದು ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ರೈಟ್ ಲೆಫ್ಟ್ ಮಾಡಿದ್ದಾರೆ.
Byrathi Suresh slams smart city engineer in Mangalore during meeting.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm