ಬ್ರೇಕಿಂಗ್ ನ್ಯೂಸ್
24-11-23 10:57 pm Mangalore Correspondent ಕರಾವಳಿ
ಉಳ್ಳಾಲ, ನ.24: ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟವು ತನಿಖೆಗೆ ಕೊಟ್ಟ ಅನುಮತಿಯನ್ನ ಹಿಂಪಡೆದದ್ದು ಖಂಡನೀಯ. ಸ್ಪೀಕರ್ ಕುರ್ಚಿಗೂ ಧರ್ಮ ಲೇಪನ ನೀಡಿರುವ ಸಚಿವ ಜಮೀರ್ ಅಹಮ್ಮದ್ ಅವರ ನಡೆಯ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ
ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿದೆ. ಯಾವುದೇ ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಯನ್ನ ಹಿಂದೆಗೆಯುವ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತ ಉಪ ಮುಖ್ಯ ಮಂತ್ರಿಯ ರಕ್ಷಣೆಗೆ ನಿಂತಿರುವುದು ಖೇದಕರ.

ತನಿಖೆ ಹಂತದಲ್ಲಿರುವ ಪ್ರಕರಣಗಳಲ್ಲಿ ಸರಕಾರ ಮೂಗು ತೂರಿಸಬಾರದು. ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರ ಕ್ರಿಮಿನಲ್ ಪ್ರಕರಣಗಳಿಗೆ ಸರ್ಕಾರ ಕೈ ಹಾಕಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದರೂ ಶಾಸನಬದ್ಧ ಸರಕಾರ ಸಚಿವ ಸಂಪುಟದ ಮೂಲಕ ತನಿಖೆಯನ್ನ ಹಿಂಪಡೆದದ್ದು ಸಿದ್ಧರಾಮಯ್ಯ ಸರಕಾರ ಭ್ರಷ್ಟಾಚಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತಿರುವುದನ್ನ ಜಗಜ್ಜಾಹೀರಾಗಿಸಿದೆ ಎಂದರು.
ಸಚಿವ ಜಮೀರ್ ಅಹ್ಮದ್ ಭಾಷಣವೊಂದರಲ್ಲಿ ಸ್ಪೀಕರ್ ಯು.ಟಿ. ಖಾದರ್ ಗೆ ಬಿಜೆಪಿಯವರೂ ಸಲಾಂ ಹೊಡೆಯುವಂತೆ ಮಾಡಿದ್ದೇವೆ ಎಂದು ಹೇಳಿರುವುದು ಪ್ರಜಾ ಪ್ರಭುತ್ವದ ಅಪಹಾಸ್ಯ ಮಾಡಿದಂತೆ. ಸಭಾಪತಿಗಳ ಕುರ್ಚಿಗೂ ಧರ್ಮದ ಲೇಪನ ನೀಡುವ ಜಮೀರ್ ರಾಜೀನಾಮೆ ಪಡೆಯುವ ತಾಕತ್ತು ಸಿದ್ಧರಾಮಯ್ಯರಿಗೆ ಇದೆಯೇ ಎಂದು ಕೋಟ ಪ್ರಶ್ನಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕಾರ್ಯದರ್ಶಿ ಸತೀಶ್ ಕುಂಪಲ ಮೊದಲಾದವರು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Mangalore Kota Srinivas Poojary slams congress DCM Dk Shivakumar.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm