ಬ್ರೇಕಿಂಗ್ ನ್ಯೂಸ್
01-12-23 01:45 pm Mangalore Correspondent ಕರಾವಳಿ
ಮಂಗಳೂರು, ಡಿ.1: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಆಕಾಂಕ್ಷಿ ಅಭ್ಯರ್ಥಿಗಳು ಮತಪಟ್ಟಿ ನೋಂದಣಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಘೋಷಿಸಿದ್ದರೆ, ಪದವೀಧರ ಕ್ಷೇತ್ರಕ್ಕೆ ಬಾಕಿ ಉಳಿಸಿಕೊಂಡಿದೆ. ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಜೆಡಿಎಸ್ ಸದಸ್ಯ ಎಸ್.ಎಲ್ ಭೋಜೇಗೌಡ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಲು ಹಲವರು ಆಸಕ್ತಿ ತೋರಿದ್ದಾರೆ.
ನೈರುತ್ಯ ವಲಯದ ಇವರೆಡೂ ಕ್ಷೇತ್ರಗಳು ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳನ್ನು ಒಳಗೊಂಡ ವಿಶಾಲ ವ್ಯಾಪ್ತಿಯದ್ದು. ಕ್ಷೇತ್ರದಲ್ಲಿ ಈ ಹಿಂದಿನ ಪರಂಪರೆಯನ್ನು ಅವಲೋಕಿಸಿದರೆ, ಬಿಜೆಪಿಯದ್ದೇ ಮೇಲುಗೈ ಎದ್ದು ಕಾಣುತ್ತದೆ. ಕಳೆದ ಬಾರಿಯ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ಸಿನ ಭೋಜೇಗೌಡ ಬಿಜೆಪಿ ಅಭ್ಯರ್ಥಿ ಗಣೇಶ್ ಕಾರ್ಣಿಕ್ ವಿರುದ್ದ ಅನಿರೀಕ್ಷಿತ ಗೆಲುವು ಕಂಡಿದ್ದರು. ಈ ಬಾರಿಯೂ ಭೋಜೇಗೌಡ ಜೆಡಿಎಸ್ ಅಭ್ಯರ್ಥಿಯಾಗುವುದು ಖಚಿತ. ಆದರೆ ಈಗಾಗಲೇ ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಆಗಿರುವುದರಿಂದ ವಿಧಾನ ಪರಿಷತ್ ಚುನಾವಣೆಗೂ ಮೈತ್ರಿ ಇರುತ್ತಾ ಅನ್ನುವ ಕುತೂಹಲ ಇದೆ.

ಎರಡು ಬಾರಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಗಣೇಶ್ ಕಾರ್ಣಿಕ್ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಹೊಂದಿದ್ದರೂ, ಶಿಕ್ಷಕ ಸಮುದಾಯದ ಒಲವು ಗಳಿಸದೇ ಇದ್ದುದರಿಂದ ಮೂರನೇ ಬಾರಿ ಸೋಲು ಕಂಡಿದ್ದರು. ಈ ಮೂಲಕ ಕರಂಬಳ್ಳಿ ಸಂಜೀವ ಶೆಟ್ಟಿ, ಕೆ.ಬಾಲಕೃಷ್ಣ ಭಟ್ ಪ್ರತಿನಿಧಿಸಿದ್ದ ಈ ಕ್ಷೇತ್ರದಲ್ಲಿ ಬಿಜೆಪಿ ಹಿಡಿತ ಕಳಕೊಂಡಿತ್ತು. ಈ ಬಾರಿ ಬಿಜೆಪಿ ಅಭ್ಯರ್ಥಿಗಳಾಗಿ ಗಣೇಶ್ ಕಾರ್ಣಿಕ್ ಜೊತೆಗೆ ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ.ಎಸ್.ಆರ್ ಹರೀಶ್ ಆಚಾರ್ಯ, ರಮೇಶ್ ಕೆ. ಅವರೂ ಆಕಾಂಕ್ಷೆ ತೋರಿದ್ದಾರೆ. ಗಣೇಶ್ ಕಾರ್ಣಿಕ್ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂಬ ಭಾವನೆಯಲ್ಲಿದ್ದರೆ, ಹರೀಶ್ ಆಚಾರ್ಯ ಮತ್ತು ರಮೇಶ್ ಶಿಕ್ಷಕರ ಸಂಪರ್ಕ, ನೋಂದಣಿ ಕಾರ್ಯದಲ್ಲಿ ತೊಡಗಿದ್ದಾರೆ.
![]()
ಇದೇ ವೇಳೆ, ಚುನಾವಣೆಗೆ ಎಂಟು ತಿಂಗಳು ಇರುವಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಮಡಿಕೇರಿ ಮೂಲದ ಕೆ.ಕೆ.ಮಂಜುನಾಥ್ ಅವರನ್ನು ಘೋಷಿಸಿದೆ. ಹಿಂದೆ ಶಿಕ್ಷಕರಾಗಿದ್ದು ನಿವೃತ್ತಿ ಪಡೆದ ಬಳಿಕ 2012ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಜುನಾಥ್, 2018ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲುಂಡಿದ್ದರು. ಈ ಬಾರಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಡಾ.ಸುದೀಪ್, ಶಿವಮೊಗ್ಗದ ರಮೇಶ್ ಶೆಟ್ಟಿ ಮತ್ತು ಚಿಕ್ಕಮಗಳೂರಿನ ಡಾ.ನಂಜೇಶ್ ಬೆನ್ನೂರು ಕಾಂಗ್ರೆಸ್ ಅಭ್ಯರ್ಥಿಯಾಗಲು ಆಕಾಂಕ್ಷಿತರಾಗಿದ್ದರು. ಇದಕ್ಕಾಗಿ ನೋಂದಣಿ ಕೆಲಸದಲ್ಲಿಯೂ ನಿರತರಾಗಿದ್ದರು. ಇಂಥ ಸಂದರ್ಭದಲ್ಲಿಯೇ ಕಾಂಗ್ರೆಸ್ ಕೆಕೆ ಮಂಜುನಾಥ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿಯಾಗಿದ್ದ ಸಿ.ಟಿ.ರವಿ ಅವರನ್ನು ಸೋಲಿಸಲು ಕಾಂಗ್ರೆಸಿಗೆ ನೆರವಾಗಿದ್ದಾರೆ ಎನ್ನಲಾದ ಭೋಜೇಗೌಡರಿಗೆ ಅನೂಕೂಲ ಮಾಡುವುದಕ್ಕಾಗಿಯೇ ಕಾಂಗ್ರೆಸ್ ಪ್ರಬಲರಲ್ಲದ ಕೆಕೆ ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆಯೇ ಎನ್ನುವ ಪ್ರಶ್ನೆಗಳು ಕೇಳಿಬರುತ್ತಿವೆ.

ಇತ್ತ ಲೋಕಸಭೆ ಚುನಾವಣೆಗೆ ಕೇಂದ್ರ ಮಟ್ಟದಲ್ಲಿ ಜೆಡಿಸ್- ಬಿಜೆಪಿ ಮೈತ್ರಿ ಆಗಿರುವುದರಿಂದ ಭೋಜೇಗೌಡರು ತಾನು ಮೈತ್ರಿ ಅಭ್ಯರ್ಥಿಯಾದಲ್ಲಿ ಗೆಲುವು ಸುಲಭ ಎನ್ನುವ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಬಿಜೆಪಿ ನಾಯಕರು ಇದ್ಯಾವುದರ ಬಗ್ಗೆಯೂ ಗೋಜಿಗೆ ಹೋದಂತಿಲ್ಲ. ರಾಜ್ಯ ನಾಯಕರು ಈ ಕುರಿತು ಯಾವುದೇ ಮುತುವರ್ಜಿ ವಹಿಸಿಲ್ಲ. ಆದರೆ ಸ್ಥಳೀಯ ಮಟ್ಟದಲ್ಲಿ ಆಕಾಂಕ್ಷಿಗಳಾಗಿದ್ದವರು ತಮ್ಮಷ್ಟಕ್ಕೇ ಕೆಲಸದಲ್ಲಿ ನಿರತರಾಗಿದ್ದಾರೆ. ರಾಜ್ಯ ನಾಯಕರನ್ನು ಭೇಟಿಯಾಗಿ ತಮ್ಮ ಅಹವಾಲು ಮಂಡಿಸುತ್ತಿದ್ದಾರೆ. ಸುದೀರ್ಘ ಕಾಲದಿಂದ ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದ ಬಿಜೆಪಿ ಈ ಬಾರಿ ಶಿಕ್ಷಕರ ಕ್ಷೇತ್ರವನ್ನು ಮರಳಿ ಗಳಿಸಲು ಒಂದಷ್ಟು ಕಸರತ್ತು ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.
ನೈರುತ್ಯ ಪದವೀಧರ ಕ್ಷೇತ್ರವನ್ನು ಹಿಂದೆ ಹಲವು ವರ್ಷಗಳಿಂದ ಬಿಜೆಪಿ ಹಿರಿಯ ನಾಯಕ ಡಿ.ಹೆಚ್ ಶಂಕರಮೂರ್ತಿ ಸತತವಾಗಿ ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯ ಗಳಿಸಿದ್ದ ಆಯನೂರು ಮಂಜುನಾಥ್ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮತ್ತೆ ಪದವೀಧರ ಕ್ಷೇತ್ರದಲ್ಲಿ ಕಣಕ್ಕಿಳಿಯಲು ತಯಾರಿ ನಡೆಸುತ್ತಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶಿವಮೊಗ್ಗದ ದಿನೇಶ್, ಟಿಕೆಟ್ ಪಡೆಯಲು ಲಾಬಿ ನಡೆಸುತ್ತಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಲು ಶಿವಮೊಗ್ಗದ ಡಾ.ಗಣೇಶ್ ಸುರ್ಜೆ, ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್, ಯುವಮೋರ್ಚಾದಲ್ಲಿ ಗುರುತಿಸಿಕೊಂಡಿರುವ ವಿಕಾಸ್ ಪುತ್ತೂರು ಪ್ರಯತ್ನದಲ್ಲಿದ್ದಾರೆ.
Preparations are underway for the south-west graduates and teachers' constituencies of the Legislative Council and the aspiring candidates are busy in the process of registering their electoral rolls. While the Congress has already announced its candidate for the teachers' seat, it is yet to contest for the graduate seat. Sitting JD(S) member S.L. Bhojegowda is all set to contest from the teachers' constituency. Many have shown interest in contesting from the BJP.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm