ಬ್ರೇಕಿಂಗ್ ನ್ಯೂಸ್
02-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.2: ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಮೈಸೂರಿನ ವೈದ್ಯ ಡಾ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಡಾ.ಸತೀಶ್ ನಮ್ಮ ಇಲಾಖೆಯಲ್ಲಿ ಆಯುಷ್ ಅಧಿಕಾರಿಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೆ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಭ್ರೂಣ ಹತ್ಯೆ ಪ್ರಕರಣಕ್ಕೂ ಸತೀಶ್ ಆತ್ಮಹತ್ಯೆಗೂ ಲಿಂಕ್ ಇದ್ಯಾ ನೋಡಬೇಕು. ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಭ್ರೂಣ ಹತ್ಯೆ ಸಂಬಂಧಿಸಿ ಎಲ್ಲ ಕಡೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕಿದ್ದೇನೆ. ಸಾರ್ವಜನಿಕರು ಸೇರಿ ಹಲವರ ಬಳಿ ಮಾಹಿತಿ ಪಡೆದು ಮುಖ್ಯಮಂತ್ರಿಗೆ ಸಿಐಡಿ ತನಿಖೆ ಕೊಡಲು ಮನವಿ ಮಾಡಿದ್ದೆ. ಬಳಿಕ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದರು. ಸ್ಪಷ್ಟ ಲೋಪ ಕಂಡುಬಂದ ಕಾರಣ ಇಬ್ಬರು ಅಧಿಕಾರಿಗಳ ಅಮಾನತು ಆಗಿದೆ.
ಈ ವೇಳೆ, ಡಾ.ಸತೀಶ್ ಅವರೂ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಅಂತ ಮಾಹಿತಿ ಬಂತು. ಈಗವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೆ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಈ ಪ್ರಕರಣಕ್ಕೂ ಸತೀಶ್ ಆತ್ಮಹತ್ಯೆಗೂ ಲಿಂಕ್ ಇದ್ಯಾ ನೋಡಬೇಕು. ಸತೀಶ್ ಕೂಡ ನಮ್ಮ ಆಯುಷ್ ಅಧಿಕಾರಿ, ಅವರ ಮೇಲೆ ಆರೋಪ ಇದೆ. ಆಯುಷ್ ಅಧಿಕಾರಿ ಆಗಿದ್ರೂ ಅಲೋಪತಿ ಪ್ರಾಕ್ಟಿಸ್ ಮಾಡ್ತಿದ್ರಂತೆ. ಇವರ ಮೇಲೆ ಸಾಕಷ್ಟು ಆರೋಪ ಇದೆ, ಮೈಸೂರಲ್ಲೂ ದೂರುಗಳಿದ್ದವು.
ಪ್ರಕರಣದಲ್ಲಿ ನಮ್ಮ ಇಲಾಖೆಯ ಅನೇಕ ಅಧಿಕಾರಿಗಳು ಶಾಮೀಲಾಗಿದ್ದಾರೆ. ಆದರೆ ಅದೆಲ್ಲ ತನಿಖೆಯಲ್ಲಿ ಗೊತ್ತಾಗಬೇಕು, ಪೊಲೀಸರು ತನಿಖೆ ನಡೆಸ್ತಾರೆ. ಆದರೆ ಅವರ ಆತ್ಮಹತ್ಯೆ ಯಾಕಾಗಿದೆ ಗೊತ್ತಿಲ್ಲ, ಇದಕ್ಕೂ ಅದಕ್ಕೂ ಸಂಬಂಧ ಇದ್ಯಾ ಗೊತ್ತಿಲ್ಲ. ಹೀಗಾಗಿ ನಾನು ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಪೊಲೀಸ್ ಇಲಾಖೆ ಮತ್ತು ಸಿಐಡಿ ಈ ಬಗ್ಗೆ ಸಮಗ್ರ ತನಿಖೆ ನಡೆಸಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಭ್ರೂಣ ಹತ್ಯೆ ತಡೆಯಲು ಕಠಿಣ ಕಾನೂನು ಅವಶ್ಯವಿದೆ. ಕಾನೂನಿನಲ್ಲಿ ಬದಲಾವಣೆ ಆಗಬೇಕಾ ಎಂಬ ಬಗ್ಗೆ ಚಿಂತನೆ ನಡೆಸಲಾಗ್ತಿದೆ. ಸ್ಕ್ಯಾನಿಂಗ್ ಸೆಂಟರ್ ಸೇರಿ ಹಲವು ಕಡೆ ಪರಿಶೀಲನೆ ಆಗಬೇಕಿದೆ. ಅದರ ಜೊತೆಗೆ ಕೆಲವು ಗುಪ್ತಚರ ಮಾಹಿತಿ ಕಲೆ ಹಾಕಬೇಕಿದೆ. ಇದರಲ್ಲಿ ಯಾರಿದ್ದಾರೆ, ಯಾರು ಮಾಡ್ತಿದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಬೇಕಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಜೊತೆ ಆರೋಗ್ಯ ಇಲಾಖೆ ಕೂಡ ಭಾಗಿಯಾಗಬೇಕಿದೆ. ಅವರಿಗೆ ಸಹಕಾರ ಕೊಟ್ಟು ನಿಜಾಂಶ ತಿಳಿಯೋ ಕೆಲಸ ಆಗಬೇಕಿದೆ ಎಂದು ಗುಂಡೂರಾವ್ ಹೇಳಿದರು.
Health minister Dinesh Gundu Rao on Saturday December 2, clarified on the chaos prevailing over the dialysis system in Karnataka and said, “The chaos over dialysis was existing even before I took charge as health minister. The earlier government had given the contract to two agencies.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am