ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm