ಬ್ರೇಕಿಂಗ್ ನ್ಯೂಸ್
04-12-23 03:45 pm Mangalore Correspondent ಕರಾವಳಿ
ಮಂಗಳೂರು, ಡಿ.4: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಮತ್ತು ಹಲ್ಲೆಗೈದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನ ಜಿಲ್ಲಾ ಕೋರ್ಟ್ ಮುಂಭಾಗದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.
ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಮಂದಿ ವಕೀಲರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮಾತನಾಡಿ, ಚಿಕ್ಕಮಗಳೂರು ವಕೀಲರ ಜೊತೆಗೆ ನಾವಿದ್ದೇವೆ. ಈ ಪ್ರಕರಣದಲ್ಲಿ ಪೊಲೀಸರು ಲೋಪ ಮಾಡಿದ್ದಾರೆ. ಸರಕಾರವೇ ಮಧ್ಯ ಪ್ರವೇಶ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ನಾವು ನಮ್ಮ ನ್ಯಾಯವನ್ನು ಕೋರ್ಟಿನಲ್ಲಿ ಪಡೆಯುತ್ತೇವೆ ಎಂದಿದ್ದಾರೆ.



ಹಿರಿಯ ವಕೀಲ ಮನೋರಾಜ್ ರಾಜೀವ ಮಾತನಾಡಿ, ಯಾರೇ ಆದರೂ ಬೈಕ್ ಕೀ ತೆಗೆದಿದ್ದನ್ನು ಪ್ರಶ್ನೆ ಮಾಡಿದ ಮಾತ್ರಕ್ಕೆ ಪೊಲೀಸರು ಹೊಡೆಯಬೇಕಿತ್ತಾ.. ಅಷ್ಟು ಮಾತನಾಡೋದಕ್ಕೂ ಅಭಿಪ್ರಾಯ ಸ್ವಾತಂತ್ರ್ಯ ಇಲ್ಲವೇ.. ಇವರೇ ಅಷ್ಟೊಂದು ಹಲ್ಲೆಗೈದು ಈಗ ಪ್ರತಿಭಟನೆ ಮಾಡಿದರೆ ಹೇಗೆ.. ಕಾನೂನು ಎಲ್ಲರಿಗೂ ಒಂದೇ ಇರುತ್ತದೆ. ಹಲ್ಲೆಗೈದ ಮೇಲೆ ಎಫ್ಐಆರ್ ದಾಖಲಿಸಿ, ಸ್ಟೇಶನ್ ಜಾಮೀನು ಹೇಗೆ ಕೊಟ್ಟಿದ್ದಾರೆ. ಎಸ್ಪಿಯವರು ಕೇಸು ದಾಖಲಿಸುತ್ತಾರೆ, ಡಿವೈಎಸ್ಪಿ ಸ್ಟೇಶನ್ ಬೈಲ್ ಕೊಟ್ಟು ನ್ಯಾಯಾಲಯ ಮಾಡೋ ಕೆಲಸವನ್ನು ತಾನೇ ಮಾಡಿದ್ದಾರೆ. ನಾವು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ ಎಂದು ಹೇಳಿದರು.
Chikmagalur assult on lawyer, protest by lawyers in Mangalore demanding justice near the court premises. An incident took place in Chikmagalur where a young lawyer who came without wearing a helmet on a two-wheeler was cornered in the police station and 6 policemen including the PSI were suspended in connection with the incident.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm