ಬ್ರೇಕಿಂಗ್ ನ್ಯೂಸ್
07-12-23 01:44 pm Mangalore Correspondent ಕರಾವಳಿ
ಮಂಗಳೂರು, ಡಿ.7: ಮೈನ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ್ದು ಆಟೋ ರಿಕ್ಷಾ ಮತ್ತು ಬೈಕ್ ಜಖಂ ಆಗಿದ್ದಲ್ಲದೆ, ರಸ್ತೆ ಬದಿ ಕುಳಿತಿದ್ದ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಮುಲ್ಕಿ ಪೇಟೆಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು ಉಡುಪಿಯತ್ತ ತೆರಳುತ್ತಿದ್ದ ಲಾರಿ ಹೆದ್ದಾರಿ ಬಿಟ್ಟು ನೇರವಾಗಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಆಟೋ ರಿಕ್ಷಾ ಹಾಗು ಬೈಕಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸಂಗಪ್ಪ ಗಂಭೀರ ಗಾಯಗೊಂಡಿದ್ದಾರೆ. ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ತನ್ನ ಮಗಳನ್ನು ಬಸ್ ನಿಲ್ದಾಣಕ್ಕೆ ಬಿಡಲು ಬರುತ್ತಿದ್ದರು. ಮಗಳು ಸವಿತಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.


ಲಾರಿ ತಮ್ಮತ್ತ ನುಗ್ಗಿ ಬರುತ್ತಿದ್ದಾಗಲೇ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರು ಎದ್ದು ಓಡಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ.
ಲಾರಿ ಡಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಬಿದ್ದಿದೆ. ಅದರಲ್ಲಿದ್ದ ಪ್ರಯಾಣಿಕರಿಗೂ ಗಾಯವಾಗಿದೆ. ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಮುಂದಕ್ಕೆ ಹೋಗಿದ್ದು ಮುಲ್ಕಿ ಪೊಲೀಸರು ಬೆನ್ನತ್ತಿ ಲಾರಿ ವಶಕ್ಕೆ ಪಡೆದಿದ್ದು ಚಾಲಕನನ್ನು ಬಂಧಿಸಿದ್ದಾರೆ.
#Mangalore #Mulki truck #accident, video goes viral. Mines truck comes to service road losing control on the highway. Man and his daughter on two wheeler have said to be injured. #BREAKING_NEWS pic.twitter.com/5nQcNMOMXi
— Headline Karnataka (@hknewsonline) December 7, 2023
Mangalore Mulki truck accident, video goes viral. Mines truck comes to service road losing control on the highway. Man and his daughter on two wheeler have said to be injured.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm