ಬ್ರೇಕಿಂಗ್ ನ್ಯೂಸ್
08-12-23 04:48 pm Udupi Correspondent ಕರಾವಳಿ
ಉಡುಪಿ, ಡಿ.08: ದೇಶಾದ್ಯಂತ ಹೃದಯಾಘಾತ ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.
ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.
ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.
ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಾಕ್ಟರ್‌ಗೇ ಈ ರೀತಿಯಾ ಹೃದಯಾಘಾತ ಸಂಭವಿಸಿದ್ದು, ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.
Doctor gets heart attack on duty in Udupi. The deceased is identified as Dr Shashikala. She had retired in February 2022 but was continuing on contractual basis due to shortage of doctors. She was screening patients in the OPD.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm