ಬ್ರೇಕಿಂಗ್ ನ್ಯೂಸ್
09-12-23 04:56 pm Mangaluru correspondent ಕರಾವಳಿ
ಮಂಗಳೂರು, ಡಿ.9: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ 'ಆಳ್ವಾಸ್ ವಿರಾಸತ್ - 2023' ಡಿ.14ರಿಂದ 17ರ ವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಈ ಬಾರಿಯ ವಿರಾಸತ್ ಅನ್ನು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮೋಹನ ಆಳ್ವಾ ವಿರಾಸತ್ ಬಗ್ಗೆ ಮಾಹಿತಿ ನೀಡಿದರು. ಡಿ.14ರಂದು ಸಂಜೆ 5.30ಕ್ಕೆ ರಾಜ್ಯಪಾಲರಿಗೆ ಗೌರವ ರಕ್ಷೆ ನಡೆಯಲಿದೆ. ಬಳಿಕ 5.45ಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾಧಿಕಾರಿ ಮುಲೈ ಮುಗಿಲನ್, ಮಾಜಿ ಸಚಿವ
ಅಭಯಚಂದ್ರ ಜೈನ್, ಭಾರತ ಸೌಟ್ಸ್ ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್. ಶಂಕರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡ, ಪ್ರಸನ್ನ ಶೆಟ್ಟಿ ಬೆಂಗಳೂರು, ರವೀಂದ್ರನಾಥ ಆಳ್ವ ಮಂಗಳೂರು, ರವಿಶಂಕರ್ ಶೆಟ್ಟಿ ಬಂಟ್ವಾಳ, ಮುಸ್ತಫಾ ಎಸ್.ಎಂ, ಪ್ರವೀಣ್ ಕುಮಾರ್, ಶ್ರೀಪತಿ ಭಟ್ ಮೂಡಬಿದಿರೆ, ಪ್ರಮುಖರಾದ ಜಯಶ್ರೀ ಅಮರನಾಥ ಶೆಟ್ಟಿ ಮೂಡುಬಿದಿರೆ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು.ರಾಧಾ ಉಪಸ್ಥಿತರಿರಲಿದ್ದಾರೆ ಎಂದರು.
ಸಂಜೆ 6:35ಕ್ಕೆ ಆಳ್ವಾಸ್ ವಿರಾಸತ್‌ನ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. 100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳ 3 ಸಾವಿರಕ್ಕೂ ಮಿಕ್ಕಿದ ಕಲಾವಿದರಿಂದ ವೈವಿಧ್ಯಮಯ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಭಜನೆ, ಪುಷ್ಪಪಲ್ಲಕ್ಕಿಗಳು, ವೇದ ಘೋಷಗಳು, ಮಂಗಳವಾದ್ಯಗಳೊಂದಿಗೆ ವಿಘ್ನನಿವಾರಕ ವಿನಾಯಕ, ಸರಸ್ವತಿ, ಶ್ರೀ ಲಕ್ಷ್ಮೀ ಹನುಮಂತ, ಶ್ರೀರಾಮ, ಶ್ರೀಕೃಷ್ಣಾದಿ ಆರೂಢ ದೇವರ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು ಡಿ.15ರಂದು ಸಂಜೆ 6 ರಿಂದ 8ರ ವರೆಗೆ ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಲ್ ಅವರಿಂದ 'ಗಾನ ವೈಭವ' ಇರಲಿದೆ. ಡಿ. 16ರಂದು ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರಿಂದ 'ಭಾವ ಲಹರಿ' ನಡೆಯಲಿದೆ. 17ರಂದು ಸಂಜೆ ಆಳ್ವಾಸ್ ವಿರಾಸತ್-2023 ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಬಾರಿ ಡಾ. ಮೈಸೂರು ಮಂಜುನಾಥ್, ಡಾ. ಪ್ರವೀಣ್
ಗೋಡ್ಕಿಂಡಿ ಹಾಗೂ ವಿಜಯ್ ಪ್ರಕಾಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬಳಿಕ ಸಂಜೆ 6:30ಕ್ಕೆ ಡಾ. ಮೈಸೂರು ಮಂಜುನಾಥ್ ಮತ್ತು ಡಾ.ಪ್ರವೀಣ ಗೋಡ್ಕಿಂಡಿ ಮತ್ತು ವಿಜಯ್ ಪ್ರಕಾಶ್ ಅವರಿಂದ 'ತಾಳ-ವಾದ್ಯ- ಸಂಗೀತ' ನಡೆಯಲಿದೆ. ರಾತ್ರಿ 7:30ಕ್ಕೆ ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ. 9.30ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಇರಲಿದೆ.
ಈ ಬಾರಿಯ ಆಳ್ವಾಸ್ ವಿರಾಸತ್‌ನಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 10 ಗಂಟೆಯ ವರೆಗೆ ಅನ್ವೇಷಣಾತ್ಮಕ ಕೃಷಿಕ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೆ.ಅಮರನಾಥ ಶೆಟ್ಟಿ (ಕೃಷಿಸಿರಿ) ಮೈದಾನದಲ್ಲಿ ಕೃಷಿ ಮೇಳ ನಡೆಯಲಿದೆ. ಕೃಷಿ ಮೇಳದಲ್ಲಿ ಹಣ್ಣು ತರಕಾರಿ, ಬೀಜಗಳು, ನರ್ಸರಿಗಳು, ಸಾವಯವ ಹಾಗೂ ರಾಸಾಯನಿಕ ಗೊಬ್ಬರಗಳು, ನೀರು ನೆಲಗಳಲ್ಲಿ ಬೆಳೆಯುವ ವಿವಿಧ ಸಸ್ಯ ಪ್ರಭೇದಗಳು, ಕೃಷಿ ಉಪಕರಣ- ಯಂತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಇರಲಿವೆ. ವಿವಿಧ ಕೃಷಿ ಸಸ್ಯ ಪ್ರಭೇದಗಳ ಬೀಜ, ಅವುಗಳನ್ನು ಬೆಳೆಸಲು ಬೇಕಾದ ಯಂತ್ರ, ತಾಂತ್ರಿಕ ಸಲಕರಣೆಗಳು, ಕೃಷಿ ಉತ್ಪನ್ನಗಳು ಈ ಬಾರಿಯ ವಿಶೇಷ ಆಕರ್ಷಣೆಯಾಗಿರಲಿದೆ.
ಇದಲ್ಲದೆ, ವಿವಿಧ ತಿನಿಸುಗಳ ಆಹಾರ ಮೇಳ, ದೇಶದ ಈಶಾನ್ಯ, ಉತ್ತರ, ಪೂರ್ವ ಸೇರಿದಂತೆ ವಿವಿಧ ರಾಜ್ಯಗಳ ಸುಮಾರು 100ಕ್ಕೂ ಹೆಚ್ಚು ಮಳಿಗೆಗಳಲ್ಲಿ ಕರಕುಶಲ ವಸ್ತು ಪ್ರದರ್ಶನ ಇರಲಿದೆ. ಫಲಪುಷ್ಪ ಮೇಳ, ಚಿತ್ರಕಲಾಮೇಳ, ಛಾಯಾಚಿತ್ರ ಪ್ರದರ್ಶನ, ಕಲಾಕೃತಿಗಳ ಪ್ರದರ್ಶನ, ಸ್ಕೌಟ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರ ಇರಲಿದೆ. ಎಲ್ಲರಿಗೂ ಉಚಿತ ಪ್ರವೇಶ ಇರಲಿದ್ದು 40 ಸಾವಿರಕ್ಕೂ ಹೆಚ್ಚು ಆಸನ, ಪಾರ್ಕಿಂಗ್ ವ್ಯವಸ್ಥೆ ಇರಲಿದೆ. ಪ್ರತಿನಿತ್ಯ 1 ಲಕ್ಷ ಜನರು ವಿರಾಸತ್ ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
Mangalore Alvas Virsath to be held from December 14th to 17th at college
20-02-25 10:06 pm
Bangalore Correspondent
Kalaburagi farmers protest, crocodile: ಕಲಬುರಗ...
20-02-25 08:59 pm
Chikkamagaluru Car Murder, Body Found; ಚಿಕ್ಕಮ...
20-02-25 06:59 pm
Chikkaballapur, Muzrai scam, Revenue Inspecto...
20-02-25 04:45 pm
ಉದಯಗಿರಿ ಗಲಭೆ ಪ್ರಕರಣ ; ಪ್ರಚೋದನಕಾರಿ ಭಾಷಣ ಮಾಡಿದ್...
20-02-25 02:47 pm
19-02-25 11:00 pm
HK News Desk
ಬಾಲಕನಿದ್ದಾಗ ನುಂಗಿದ್ದ ಪೆನ್ ಕ್ಯಾಪ್ ; 21 ವರ್ಷ ಕಳ...
19-02-25 06:41 pm
Maha Kumbh river, NGT Board: ಕುಂಭಮೇಳ ನದಿ ನೀರು...
19-02-25 01:54 pm
ಇಬ್ಬರು ಹೆಂಡಿರ ಮುದ್ದಿನ ಗಂಡ ; ವಾರದ 3 ದಿನ ಅಲ್ಲಿ....
18-02-25 10:49 pm
Hindu idols Bishop House, Pala diocese, Kera...
18-02-25 10:45 pm
21-02-25 12:40 am
Giridhar Shetty, Mangaluru
Protest Mangalore, 400 KV, Catholic sabha: ಉಡ...
20-02-25 06:48 pm
Kmc Mangalore, hospital: 2 ವರ್ಷದ ಮಗುವಿನ ಗಂಟಲಲ...
19-02-25 01:56 pm
Satish Jarkiholi, Mangalore: ಕೆಪಿಸಿಸಿ ಅಧ್ಯಕ್ಷ...
18-02-25 12:36 pm
Dinesh Gundurao, Munner katipalla, Sand Mafia...
17-02-25 10:56 pm
20-02-25 01:22 pm
Mangalore Correspondent
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm
Madikeri police, Fake Scheme, Mangalore crime...
18-02-25 06:04 pm
Mangalore Crime, Surathkal, Car: ಮದುವೆ ಸಮಾರಂಭ...
18-02-25 12:11 pm