ಬ್ರೇಕಿಂಗ್ ನ್ಯೂಸ್

AVBP protest, Mangalore University: ಏಕಾಏಕಿ ಶುಲ್ಕ ಏರಿಕೆ ; ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ- ಗಾಜಿನ ಬಾಗಿಲು ಪುಡಿ, ಸರ್ಕಾರದ ಹಣ ಬರ್ತಾ ಇಲ್ಲ, ಏನ್ಮಾಡ್ಲಿ ಎಂದ ಕುಲಪತಿಗೆ ವಿದ್ಯಾರ್ಥಿಗಳ ತರಾಟೆ, ನಿಮ್ಮ ಹೊರೆಯನ್ನು ವಿದ್ಯಾರ್ಥಿಗಳಿಗೆ ಹಾಕ್ತೀರಾ ಎಂದು ಆಕ್ರೋಶ    |    ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ್, ಡೀಸೆಲ್ ಬಿಡಿ, ಇಂಧನವೇ ಇಲ್ಲದೆ ಓಡಲಿದೆ ರೈಲು ! ಬರೀ ನೀರು ಬಳಸ್ಕೊಂಡೇ ಹೈಡ್ರೋಜನ್ ರೈಲು, ಅತಿ ಕಡಿಮೆ ವೆಚ್ಚ, ಪರಿಸರ ಸ್ನೇಹಿ !    |    Waqf row, Mangalore, CM Siddaramaiah; ವಕ್ಫ್ ಆಸ್ತಿ ಹೆಸರಲ್ಲಿ ಭೂ ಕಬಳಿಕೆಗೆ ಮುಖ್ಯ ಕಾರ್ಯದರ್ಶಿಯಿಂದ್ಲೇ ಆದೇಶ ; ಖಬರಸ್ತಾನಕ್ಕೂ ಸಾವಿರಾರು ಎಕ್ರೆ ಸರ್ಕಾರಿ ಭೂಮಿ ಅತಿಕ್ರಮಣಕ್ಕೆ ಗ್ರೀನ್ ಸಿಗ್ನಲ್, ‘ಗೊತ್ತಿಲ್ಲ, ನೋಟೀಸ್ ನೀಡಿಲ್ಲ’ ಎನ್ನುತ್ತಿದ್ದವರಿಗಿಲ್ಲಿದೆ ಸಾಕ್ಷ್ಯ!!    |   

Puttur Municapal elections, Arun Puthila: ಪುತ್ತೂರು ನಗರಸಭೆಯಲ್ಲೂ ತೊಡೆ ತಟ್ಟಿದ ಪುತ್ತಿಲ ಪರಿವಾರ ; ಎರಡೂ ಸ್ಥಾನಗಳಿಗೆ ಬಿಜೆಪಿ ವಿರುದ್ಧ ಅಭ್ಯರ್ಥಿ ಕಣಕ್ಕೆ, ತ್ರಿಕೋನ ಸ್ಪರ್ಧೆಗೆ ವೇದಿಕೆ ರೆಡಿ, ಪಕ್ಷದ ನಾಯಕರಿಗೆ ಅರುಣ್ ಪುತ್ತಿಲ ಬಿಸಿತುಪ್ಪ !    

14-12-23 08:05 pm       Mangalore Correspondent   ಕರಾವಳಿ

ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ವಿರುದ್ಧ ಪುತ್ತಿಲ ಪರಿವಾರದ ಬಂಡಾಯ ಮುಂದುವರಿದಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಎರಡೂ ಸ್ಥಾನಗಳಿಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಗಳನ್ನು ಇಳಿಸಲಾಗಿದೆ.

ಪುತ್ತೂರು, ಡಿ.14: ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ವಿರುದ್ಧ ಪುತ್ತಿಲ ಪರಿವಾರದ ಬಂಡಾಯ ಮುಂದುವರಿದಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಎರಡೂ ಸ್ಥಾನಗಳಿಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಗಳನ್ನು ಇಳಿಸಲಾಗಿದೆ. ಗುರುವಾರ ಬೆಳಗ್ಗೆ ಸಂಘ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಮೆರವಣಿಗೆ ಮೂಲಕ ಬಂದು ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ವಾರ್ಡ್ ನಂಬರ್ 1ರಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ. ರಾವ್ ಹಾಗೂ ವಾರ್ಡ್ ನಂಬರ್ 11ಕ್ಕೆ ಚಿಂತನ್ ಪಿ. ಅವರು ನಾಮಪತ್ರ ಸಲ್ಲಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ, ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರಾಧ್ಯಕ್ಷ ಅನಿಲ್ ತೆಂಕಿಲ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಅರುಣ್ ಪುತ್ತಿಲ ಮಾತನಾಡಿ, ದೇಶವೇ ಯುವ ನಾಯಕತ್ವಕ್ಕೆ ಮಣೆ ಹಾಕುತ್ತಿರುವಾಗ ನಾವು ಕೂಡ ಯುವ ನಾಯಕರಿಗೆ ಹಾಗೂ ಸಾಮಾನ್ಯ ಸ್ವಯಂಸೇವಕರಿಗೆ ಅವಕಾಶ ನೀಡಿದ್ದೇವೆ. ನಾರಿ ಶಕ್ತಿ ಭಾರತದ ಶಕ್ತಿ, ಎಲ್ಲ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನತೆ ಸಿಗಬೇಕು ಅನ್ನುವ ಉದ್ದೇಶದಿಂದ ಅವಕಾಶ ನೀಡಿದ್ದೇವೆ ಎಂದು ಹೇಳಿದರು.

ಬಿಜೆಪಿಯಿಂದಲೂ ಅಭ್ಯರ್ಥಿ ಘೋಷಣೆ

ಇತ್ತ ಬಿಜೆಪಿಯಿಂದಲೂ ಎರಡೂ ವಾರ್ಡ್ ಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಬೆಳಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ. ಆನಂತರ, ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಂದನೇ ವಾರ್ಡ್ ಗೆ ಸುನೀತಾ, 11ನೇ ವಾರ್ಡ್ ಗೆ ರಮೇಶ್ ರೈ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಪುತ್ತಿಲ ಪರಿವಾರದ ಬಂಡಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುದರ್ಶನ್ ಮೂಡುಬಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಪಕ್ಷದ ನೆಲೆಯಲ್ಲಿ ಅಭ್ಯರ್ಥಿ ಇಳಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಯಾರಿಗೇ ಬೇಕಾದರೂ ಚುನಾವಣೆ ಸ್ಪರ್ಧಿಸಲು ಅವಕಾಶ ಇದೆ. ಪಕ್ಷದ ಚೌಕಟ್ಟಿನಲ್ಲಿ ನಾವು ಅಭ್ಯರ್ಥಿ ಹಾಕಿದ್ದು, ಸ್ಪರ್ಧಿಸಿ ಗೆಲ್ಲುತ್ತೇವೆ ಎಂದು ಹೇಳಿದರು.

ಗ್ರಾಪಂ ಬಳಿಕ ನಗರಸಭೆಗೂ ಬಂಡಾಯ

ಮೂರು ತಿಂಗಳ ಹಿಂದೆ ಪುತ್ತೂರಿನಲ್ಲಿ ನಡೆದ ಮೂರು ಗ್ರಾಮ ಪಂಚಾಯತ್ ಉಪ ಚುನಾವಣೆಗಳಲ್ಲಿಯೂ ಪುತ್ತಿಲ ಪರಿವಾರ ಬಂಡಾಯ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿತ್ತು. ಇದೀಗ ನಗರಸಭೆಯಲ್ಲೂ ಬಂಡಾಯ ಮುಂದುವರಿದಿದ್ದು, ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಉನ್ನತ ಮಟ್ಟದಲ್ಲಿ ಪುತ್ತಿಲ ಪರಿವಾರದ ಮುಖಂಡರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಗಳು ನಡೆದಿದ್ದರೂ, ಅದು ಸಫಲವಾಗಿರಲಿಲ್ಲ. ಅರುಣ್ ಪುತ್ತಿಲ ಪಕ್ಷ ಸೇರ್ಪಡೆಗೆ ಪುತ್ತೂರಿನಲ್ಲಿ ದೊಡ್ಡ ತಲೆಗಳೇ ಅಡ್ಡಿಯಾಗಿರುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಇದೀಗ ನಗರಸಭೆಯಲ್ಲೂ ಪುತ್ತಿಲ ಪರಿವಾರ ತೊಡೆ ತಟ್ಟಿರುವುದು ಕಾಂಗ್ರೆಸ್ ಜೊತೆಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

Puttur town municapal elections two BJP candidates nominated against Arun Puthila team.