ಬ್ರೇಕಿಂಗ್ ನ್ಯೂಸ್
17-12-23 05:28 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ವತಿಯಿಂದ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ರಾಜ್ಯಾದ್ಯಂತ ಭಾನುವಾರ ಪರೀಕ್ಷೆ ನಡೆಸಲಾಗಿದ್ದು, ಮಂಗಳೂರಿನ ಬಲ್ಮಠದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಕಾಲೇಜು ವಿದ್ಯಾರ್ಥಿಗಳನ್ನೇ ಬಳಸಿರುವುದು ಪತ್ತೆಯಾಗಿದೆ. ಆಮೂಲಕ ಸರ್ಕಾರದ ರಾಜ್ಯ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ.
ಬಲ್ಮಠದ ಸರಕಾರಿ ಹೆಣ್ಮಕ್ಕಳ ಕಾಲೇಜು ಸೇರಿದಂತೆ ಮಂಗಳೂರಿನಲ್ಲಿ ಮೂರು ಕಡೆ ಪರೀಕ್ಷಾ ಕೇಂದ್ರಗಳಿದ್ದವು. ಬಲ್ಮಠದ ಪರೀಕ್ಷಾ ಕೇಂದ್ರದಲ್ಲಿ ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳೇ ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಮಾಧ್ಯಮ ಪ್ರತಿನಿಧಿಗಳು ಸ್ಥಳಕ್ಕೆ ತೆರಳಿದಾಗ, ಹದಿಹರೆಯದ ವಿದ್ಯಾರ್ಥಿ- ವಿದ್ಯಾರ್ಥಿನಿಯರೇ ಶಿವಮೊಗ್ಗ, ಹಾಸನ ಸೇರಿ ಬೇರೆ ಬೇರೆ ಕಡೆಯಿಂದ ಆಗಮಿಸಿದ್ದ ಅಭ್ಯರ್ಥಿಗಳನ್ನು ತಪಾಸಣೆಯಲ್ಲಿ ತೊಡಗಿದ್ದರು. ಸ್ಥಳದಲ್ಲಿ ಮಹಿಳಾ ಪೊಲೀಸರನ್ನಷ್ಟೇ ಭದ್ರತೆಗೆ ನಿಯೋಜಿಸಲಾಗಿತ್ತು. ಪೊಲೀಸರು ಸ್ಥಳದಲ್ಲಿದ್ದಿದ್ದು ಬಿಟ್ಟರೆ, ತಪಾಸಣೆಗೂ ಅವರಿಗೂ ಸಂಬಂಧ ಇಲ್ಲದವರಂತೆ ಇದ್ದರು. ವಿಶೇಷ ಅಂದ್ರೆ, ಇನ್ನೂ ಮೀಸೆ ಮೂಡದ ವಿದ್ಯಾರ್ಥಿಗಳೇ ಸೆಕ್ಯುರಿಟಿ ಗೌನ್ ಹಾಕ್ಕೊಂಡು ತಪಾಸಣೆ ಕಾರ್ಯದಲ್ಲಿ ನಿರತರಾಗಿದ್ದರು.
ಇದಲ್ಲದೆ, ಸ್ಥಳದಲ್ಲಿ ಯಾವುದೇ ಮೆಟಲ್ ಡಿಟೆಕ್ಟರ್ ಆಗಲೀ, ಇತರ ಯಾವುದೇ ತಪಾಸಣಾ ಉಪಕರಣಗಳನ್ನೂ ಬಳಕೆ ಮಾಡಿಲ್ಲ. ಪರೀಕ್ಷೆಯಲ್ಲಿ ನಕಲು ಆಗುವುದನ್ನು ತಡೆಯಲು ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬೇಕಾಗಿತ್ತು. ಅಲ್ಲದೆ, ಕೆಪಿಎಸ್ಸಿಯಿಂದ ನಿಯೋಜಿತ ಅಧಿಕಾರಿಗಳು ಅಥವಾ ಪೊಲೀಸರೇ ಅಭ್ಯರ್ಥಿಗಳ ತಪಾಸಣೆ ಕೈಗೊಳ್ಳಬೇಕಾಗಿತ್ತು. ಆದರೆ ಇದ್ಯಾವುದನ್ನೂ ಮಾಡದೆ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಏಳೆಂಟು ವಿದ್ಯಾರ್ಥಿಗಳೇ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿ ಒಳಬಿಡುತ್ತಿದ್ದರು. ತಪಾಸಣೆ ಬಗ್ಗೆ ಅರಿವೇ ಇಲ್ಲದ ಕಾಲೇಜು ವಿದ್ಯಾರ್ಥಿಗಳನ್ನು ಬಳಸ್ಕೊಂಡು ಕಾಟಾಚಾರಕ್ಕೆ ತಪಾಸಣೆ ನಡೆಸಿದಂತಾಗಿದ್ದು ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಂಡಿದೆ.
ರಾಜ್ಯ ಸರ್ಕಾರದ ಕೆಪಿಎಸ್ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ನಕಲು ಮಾಡುವುದನ್ನು ತಡೆಯಲು ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗುತ್ತದೆ. ಕೆಪಿಎಸ್ಸಿ ನೀಡಿರುವ ಪ್ರಕಟಣೆಯಲ್ಲಿ ಭದ್ರತೆ ಉದ್ದೇಶಕ್ಕೆ ಮೊಬೈಲ್ ಜಾಮರ್, ಮೆಟಲ್ ಡಿಟೆಕ್ಟರ್, ಬಯೋ ಮೆಟ್ರಿಕ್ ಫೇಸ್ ಡಿಟೆಕ್ಷನ್ ಹಾಗೂ ಸಿಸಿ ಕ್ಯಾಮರಾಗಳನ್ನು ಬಳಕೆಗೆ ಸೂಚಿಸಲಾಗಿದೆ. ಆದರೆ ಇದ್ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಇಲ್ಲಿ ಬಳಕೆ ಮಾಡಿರಲಿಲ್ಲ. ಅದರ ಬದಲಿಗೆ, ಪಿಯುಸಿ, ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಪಾಸಣೆಗೆ ಬಳಸಿಕೊಳ್ಳಲಾಗಿದೆ.
ಈ ಬಗ್ಗೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಲ್ಲಿ ಕೇಳಿದಾಗ, ಕೆಪಿಎಸ್ಸಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆಗೆ ಪ್ರತ್ಯೇಕ ಏಜನ್ಸಿಗೆ ಕೊಟ್ಟಿದ್ದಾರೆ. ನಮಗೂ ಅದಕ್ಕೂ ಸಂಬಂಧ ಇಲ್ಲ, ವಿದ್ಯಾರ್ಥಿಗಳನ್ನು ಬಳಕೆ ಮಾಡಿರುವ ಬಗ್ಗೆ ಗೊತ್ತಿಲ್ಲ. ಇವರು ನಮ್ಮ ಕಾಲೇಜಿನ ವಿದ್ಯಾರ್ಥಿಗಳಲ್ಲ ಎಂದು ಹೇಳಿದ್ದಾರೆ. ಅಲ್ಲಿ ತಪಾಸಣೆ ನಿರತರಾಗಿದ್ದ ವಿದ್ಯಾರ್ಥಿಗಳ ಬಳಿ ಕೇಳಿದಾಗ, ಬೆಂಗಳೂರಿನ ರಾಜೇಶ್ ಎಂಬವರು ನಮಗೆ ತಪಾಸಣೆಗೆ ಹೇಳಿದ್ದಾರೆ, ಬೇರೇನೂ ತಿಳಿದಿಲ್ಲ. ಏಜನ್ಸಿ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.
ಇತ್ತೀಚೆಗೆ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ನಕಲು ಮಾಡಲು ಬ್ಲೂಟೂತ್ ಬಳಸಿರುವುದು ಪತ್ತೆಯಾಗಿತ್ತು. ಭಾರೀ ಅಕ್ರಮ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದ್ದಲ್ಲದೆ, ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು. ಈ ಹಿಂದೆ ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ರೂವಾರಿಯಾಗಿದ್ದ ಆರ್.ಡಿ. ಪಾಟೀಲನೇ ಇದರ ರೂವಾರಿಯೆಂದು ತಿಳಿದು ಆತನನ್ನೂ ಬಂಧಿಸಲಾಗಿತ್ತು. ಇಂಥ ಅಕ್ರಮದ ನಿದರ್ಶನ ಇರುವಾಗ ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ಇಷ್ಟೊಂದು ನಿರ್ಲಕ್ಷ್ಯ ವಹಿಸಿರುವುದು ಭಾರೀ ಅನುಮಾನಕ್ಕೆ ಕಾರಣವಾಗಿದೆ.
Students appointed as Security personals for KPSC exams 2023 in Mangalore. Students were seen checking KPSE aspirants before entering the examination hall as Security personals. This incident was seen at balmatta girls college in Mangalore.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am