ಬ್ರೇಕಿಂಗ್ ನ್ಯೂಸ್
20-12-23 10:18 pm Mangalore Correspondent ಕರಾವಳಿ
ಬಂಟ್ವಾಳ, ಡಿ.20: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಾಲದ ಬಡ್ಡಿ ವಿಚಾರದಲ್ಲಿ ಯೋಜನೆಯ ಸದಸ್ಯರು ಮತ್ತು ಸೌಜನ್ಯಾ ಪರ ಹೋರಾಟಗಾರರ ತಂಡದ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಸಜಿಪಮುನ್ನೂರಿನಲ್ಲಿ ನಡೆದಿದೆ.
ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರಾದ ಸಜಿಪಮುನ್ನೂರಿನ ಬೇಬಿ ಎಂಬವರ ಮನೆಯಲ್ಲಿ ಮಂಗಳವಾರ ಸಂಜೆ 25ರಷ್ಟು ಮಹಿಳೆಯರು ಮತ್ತು ಕೆಲವು ಪುರುಷರು ಸೇರಿದ್ದರು. ಸೌಜನ್ಯಾ ಪರ ಹೋರಾಟದಲ್ಲಿರುವ ಕಾರ್ಕಳದ ಸಾಣೂರಿನಿಂದ ಬಂದಿದ್ದ ಶೈಲಜಾ ಶೆಟ್ಟಿ, ಯೋಗೀಶ್ ಶೆಟ್ಟಿ, ಮುಡಿಪು ರವೀಂದ್ರ ಶೆಟ್ಟಿ, ಕೃಷ್ಣ ಸರಪಾಡಿ, ಗಣೇಶ್ ಕಂಟಲ್ಪಾಡಿ ಎಂಬವರು ಬೇಬಿ ಎಂಬವರ ಮನೆಗೆ ಬಂದಿದ್ದರು. ಈ ವೇಳೆ, ಸಾಲದಲ್ಲಿ ಬಡ್ಡಿ ಎಷ್ಟು ಕಟ್ಟುತ್ತೀರಿ ಎಂಬ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿತ್ತು.
ಶೈಲಜಾ ಶೆಟ್ಟಿ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ, ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಅಲ್ಲಿದ್ದವರು ತಕರಾರು ತೆಗೆದಿದ್ದಾರೆ. ಶೈಲಜಾ ಮತ್ತು ಅವರ ಜೊತೆಗೆ ತೆರಳಿದ್ದವರನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆಂದು ರವೀಂದ್ರ ಶೆಟ್ಟಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಕೆಲವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ರವೀಂದ್ರ ಶೆಟ್ಟಿ ಈ ಹಿಂದೆ ಗ್ರಾಮಾಭಿವೃದ್ಧಿ ಯೋಜನೆಯಲ್ಲಿದ್ದು ಈಗ ಆ ಕೆಲಸ ಬಿಟ್ಟು ಸೌಜನ್ಯಾ ಪರ ಹೋರಾಟದಲ್ಲಿ ತೊಡಗಿಸಿದ್ದಾರೆ.
ಸದರಿ ಘಟನೆಗೆ ಸಂಬಂಧಿಸಿ ಬೇಬಿ ಅವರು ಪ್ರತಿ ದೂರು ನೀಡಿದ್ದು, ತನ್ನ ಮನೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಸಭೆ ನಡೆಯತ್ತಿದ್ದಾಗ ಶೈಲಜಾ ಶೆಟ್ಟಿ, ಗಣೇಶ್ ಕಂಟಲ್ಪಾಡಿ, ಕೃಷ್ಣ ಸರಪಾಡಿ, ರವೀಂದ್ರ ಶೆಟ್ಟಿ, ಯೋಗೀಶ್ ಶೆಟ್ಟಿ ಬಂದು ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಕರಾರು ತೆಗೆದು ಅಲ್ಲಿದ್ದ ಸದಸ್ಯರಿಗೆ ಹಲ್ಲೆ ನಡೆಸಿದ್ದಾರೆ. ಇದರಿಂದ ಬೇಬಿ ಅವರು ಬಿಸಿ ರೋಡ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎರಡೂ ದೂರುಗಳ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
Mangalore Sajipamunnur development members and Sowjanya case supporters fight assault over loan matter
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm