ಬ್ರೇಕಿಂಗ್ ನ್ಯೂಸ್
20-12-23 10:24 pm Mangalore Correspondent ಕರಾವಳಿ
ಮಂಗಳೂರು, ಡಿ.20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಕೊರೊನಾ ಟೆಸ್ಟಿಂಗ್ ಆರಂಭಿಸಿದ್ದು, ಮೊದಲ ದಿನವೇ ಒಂದು ಪಾಸಿಟಿವ್ ಕಂಡುಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ ಸಂಬಂಧೀ ಕಾಯಿಲೆಯಿಂದ ದಾಖಲಾಗಿದ್ದ ಉಡುಪಿ ಮೂಲದ 82 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರನ್ನು ಅದೇ ಆಸ್ಪತ್ರೆಯಲ್ಲಿ ಐಸೊಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ, ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಸುದ್ದಿಗೋಷ್ಟಿ ಮೂಲಕ ಕೋವಿಡ್ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಕೇರಳ ಗಡಿಭಾಗದಲ್ಲಿ ಕಡ್ಡಾಯ ತಪಾಸಣೆಗೆ ಸೂಚನೆ ಬಂದಿಲ್ಲ. ಕಾಸರಗೋಡು ಜಿಲ್ಲೆಯಲ್ಲಿ ಒಂದೆರಡು ಪ್ರಕರಣ ಪತ್ತೆಯಾಗಿದೆ. ಹಾಗೆಂದು ಆ ಭಾಗದಿಂದ ಬರೋರನ್ನು ನಿರ್ಬಂಧಿಸಲು ಮುಂದಾಗಿಲ್ಲ ಎಂದು ತಿಳಿಸಿದ್ದಾರೆ.
ಗಡಿಭಾಗವಾದ ಕಾರಣ ಕಾಸರಗೋಡು ಕಡೆಯಿಂದ ಹಲವಾರು ಮಂದಿ ಮಂಗಳೂರಿಗೆ ಬರ್ತಾರೆ. ರಾಜ್ಯ ಸರಕಾರದಿಂದ ಬಂದಿರುವ ಮಾರ್ಗಸೂಚಿ ಪ್ರಕಾರ, ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೂ ಸಭೆ ನಡೆಸಲಾಗಿದೆ. ಸಾರ್ವಜನಿಕರು ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ, ಅನಗತ್ಯ ಗೊಂದಲ ಮಾಡಿಕೊಳ್ಳುವುದೂ ಬೇಡ ಎಂದವರು ತಿಳಿಸಿದ್ದಾರೆ.
ಸದ್ಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಮುಂಜಾಗ್ರತೆ ಹಿನ್ನೆಲೆಯಲ್ಲಿ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಸಿದ್ದವಾಗಿಡಲು ಸೂಚಿಸಿದ್ದೇವೆ. ಇದರ ಜೊತೆಗೆ ಕಾಸರಗೋಡು ಗಡಿಗೆ ಹೊಂದಿಕೊಂಡಿರುವ ಸ್ವರ್ಗ, ಸಾರಡ್ಕ, ಜಾಲ್ಸೂರು, ತಲಪಾಡಿ, ಈಶ್ವರಮಂಗಲದಲ್ಲಿ ಅಲರ್ಟ್ ಇರಲು ಸೂಚಿಸಲಾಗಿದೆ. ಹಾಗೆಂದು, ಈ ಐದು ಕಡೆ ಯಾವುದೇ ನಿರ್ಬಂಧ ಇರೋದಿಲ್ಲ. ಆದರೆ ಅಲ್ಲಿಂದ ಬರೋರಿಗೆ ನಮ್ಮ ಸಿಬ್ಬಂದಿ ಮೈಕ್ ಮೂಲಕ ಮಾಹಿತಿ ಕೊಡ್ತಾರೆ. ನಮಗೆ ಗಡಿಯಲ್ಲಿ ತಪಾಸಣೆ ಮಾಡಲು ಸೂಚನೆ ಬಂದಿಲ್ಲ. ಜನರಿಗೆ ಮಾಹಿತಿ ಕೊಡ್ತೇವೆ, ಅಗತ್ಯ ಬಿದ್ದರೆ ತಪಾಸಣೆ ಮಾಡುತ್ತೇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಒಟ್ಟು ಸೇರಿ 10,986 ಬೆಡ್ ಇದೆ, 1376 ಆಕ್ಸಿಜನ್ ಸಪೋರ್ಟ್ ಬೆಡ್ ಗಳಿವೆ. ಐಸಿಯು ಬೆಡ್ 728, ವೆಂಟಿಲೇಟರ್ 336 ಇವೆ ಎಂದು ಹೇಳಿದ ಅವರು, ಕೇರಳದ ಶಬರಿಮಲೆಗೆ ಹೋಗಿ ಬಂದವರಿಗೆ ರೋಗ ಲಕ್ಷಣ ಇದ್ರೆ ಪರೀಕ್ಷೆಗೆ ಒಳಪಡಿಸುತ್ತೇವೆ. ಸದ್ಯ ನಮಗೆ ನಿತ್ಯ ಕನಿಷ್ಠ 321 ಜನರನ್ನು ಪರೀಕ್ಷೆ ಮಾಡುವ ಬಗ್ಗೆ ಗುರಿ ನೀಡಲಾಗಿದೆ. ಅದನ್ನು ಮಾಡುತ್ತೇವೆ ಎಂದು ಹೇಳಿದರು.
Mangalore One Corona positive case detected says DHO. No RTPCR In talapdy border, Ayyappa devotees should take care of themselves if any symptoms found says DHO Thimayya.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm