ಬ್ರೇಕಿಂಗ್ ನ್ಯೂಸ್
23-12-23 08:34 pm Mangalore Correspondent ಕರಾವಳಿ
ಮಂಗಳೂರು, ಡಿ.23: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಜಾಬ್ ನಿಷೇಧ ಹಿಂಪಡೆದರೆ ಕರ್ನಾಟಕದ ಎಲ್ಲ ಶಾಲೆಗಳು ಕೇಸರಿಮಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಒಂದು ವರ್ಗದ ಓಲೈಕೆಗಾಗಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತನ್ನೊಳಗಿನ ಪಿಎಫ್ಐ ಮಾನಸಿಕತೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಐದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಪಿಎಫ್ಐ, ಕ್ಯಾಂಪಸ್ ಫ್ರಂಟ್, ಎಸ್ಡಿಪಿಐನಂತಹ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿದ್ದವು. ಆನಂತರ ಪಿಎಫ್ಐ ನಿಷೇಧ ಆಗಿದ್ದರೂ ಅವುಗಳ ಮಾನಸಿಕತೆ ಕಾಂಗ್ರೆಸಿನಲ್ಲಿ ಕಾಣಿಸಿಕೊಳ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಹೇಳಿರುವುದು ಪಿಎಫ್ಐ ಮಾನಸಿಕತೆಯನ್ನು ತೋರಿಸತ್ತೆ.
ಪಿಎಫ್ಐ ನಿಷೇಧ ಆದರೂ ಅದರ ಬದಲು ಕಾಂಗ್ರೆಸ್ಸೇ ಆ ಜಾಗವನ್ನು ತುಂಬಿದಂತೆ ಭಾಸವಾಗುತ್ತದೆ. ಮೊನ್ನೆ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಓಟಿಗೋಸ್ಕರ, ಮುಸ್ಲಿಮರನ್ನು ಮೆಚ್ಚಿಸಲು ಹೊರಟಿದ್ದಾರೆ. ಸರ್ವಜನಾಂಗದ ಶಾಂತಿಯತೋಟ ಮಾಡುತ್ತೇನೆ ಎಂದವರು ಈಗ ಒಂದು ವರ್ಗದ ಪರ ನಿಂತಿದ್ದಾರೆ. ಇದು ಖಂಡನೀಯ ಮತ್ತು ನಾವು ಸಹಿಸುವುದಿಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
The Vishwa Hindu Parishad (VHP) has strongly objected to Chief Minister Siddaramaiah's decision to revoke the hijab ban. VHP divisional secretary Sharan Pampwell warned that all schools in Karnataka will turn saffron if the hijab ban is lifted.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm