ಬ್ರೇಕಿಂಗ್ ನ್ಯೂಸ್
24-12-23 08:49 pm Mangaluru Correspondent ಕರಾವಳಿ
ಮಂಗಳೂರು, ಡಿ.24: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಬಹಳಷ್ಟು ಕಡಿಮೆಯಾಗಿದೆ ಎಂದು ನನಗೆ ಮಾಹಿತಿ ಬಂದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದ ಅವರಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ವಿಫಲವಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಂತಹ ಪ್ರಕರಣಗಳ ನಂಬರ್ ಗಳು ಕಡಿಮೆ ಆಗಿರೋದಂತು ಸತ್ಯ. ನಾವು ಅದರ ಬಗ್ಗೆ ಬಹಳ ಎಚ್ಚರಿಕೆ ವಹಿಸುತ್ತಿದ್ದೇವೆ. ಪೊಲೀಸ್ ಕಮಿಷನರ್, ಎಸ್ಪಿ, ಐ.ಜಿಯವರಿಗೆ ಸೂಚನೆ ಕೊಟ್ಟಿದ್ದೇನೆ. ಸಮಾಜದಲ್ಲಿ ಸಾಮರಸ್ಯ ಇರಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ ಎಂದು ಸೂಚನೆ ನೀಡಿದ್ದೇನೆ.
ಹಾಗಂತ ಎಲ್ಲರ ಮೇಲೆ ಕೇಸು ಹಾಕಬೇಕೆಂದಿಲ್ಲ. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ. ಅಂತಹ ಕೃತ್ಯ ಮಾಡದವರು ಭಯ ಪಡುವ ಅಗತ್ಯವಿಲ್ಲ ಎಂದರು. ಆ್ಯಂಟಿ ಕಮ್ಯೂನಲ್ ವಿಂಗ್ ಗೆ ನೇಮಕಾತಿ ಪ್ರಕ್ರಿಯೆ ಆಗ್ತಿದೆ. ಅವರಿಗೆ ಇನ್ನು ಹೆಚ್ಚಿನ ಸಿಬ್ಬಂದಿ ಕೊಡಬೇಕಾಗಿದೆ ಎಂದು ಕೇಳಿದ್ದಾರೆ. ಸಿಬಂದಿ ಪೂರೈಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹಿಜಾಬ್ ನಿಷೇಧ ವಾಪಸು ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬೊಮ್ಮಾಯಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ, ನಾವು ಆದೇಶ ಮಾಡಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಮಾಡಿದ್ರೂ ನಾವು ಪರಿಶೀಲನೆ ಮಾಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಾಧಕ ಬಾಧಕ ನೋಡಿಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತೆ. ಗೊಂದಲ ಮೂಡಿಸುವ ಅವಶ್ಯಕತೆಯಿಲ್ಲ ಎಂದರು.
ಆ ಸಮುದಾಯವದವರು ಹಿಂದಿನಿಂದಲೂ ಸಹ ಹಿಜಾಬ್ ಹಾಕಿಕೊಂಡು ಶಾಲೆಗೆ ಬರ್ತಿದ್ದಾರೆ. ಇತ್ತಿಚೇಗಷ್ಟೇ ಬಿಜೆಪಿ ಸರ್ಕಾರ ಬಂದಾಗ ಅದರ ಬಗ್ಗೆ ಬೇರೆ ಬೇರೆ ವ್ಯಾಖ್ಯಾನ ಆಗಿದೆ. ಸಂವಿಧಾನವನ್ನು ಬಿಟ್ಟು ನಾವು ಯಾವುದೇ ಕೆಲಸ ಮಾಡೋದಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಮಾಡಿದ್ರೂ ಕೆಲವರಿಗೆ ನೋವಾಗಬಹುದು, ಕೆಲವರಿಗೆ ಸಂತೋಷವಾಗಬಹುದು. ಆದ್ರೆ ಸಂವಿಧಾನದ ಚೌಕಟ್ಟಿನಲ್ಲಿ ಮಾತ್ರ ತೀರ್ಮಾನ ತೆಗೆದುಕೊಳ್ತೇವೆ ಎಂದು ಪರಮೇಶ್ವರ್ ಹೇಳಿದರು.
Moral policing rates are much lesser than before in Mangalore says Home Minister
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm