ಬ್ರೇಕಿಂಗ್ ನ್ಯೂಸ್
25-12-23 10:40 pm Mangalore Correspondent ಕರಾವಳಿ
ಮಂಗಳೂರು, ಡಿ.25: ಪ್ರಕಾಶ ಅಂದರೆ ಬೆಳಕು. ಜನರ ಕಷ್ಟಕ್ಕೆ ನೆರವಾಗಬೇಕು ಎನ್ನುವ ಬೆಳಕು ಹೊರಗಿನಿಂದ ಫೋರ್ಸ್ ಆಗಿ ಬರೋದಲ್ಲ. ಮನಸಿನ ಒಳಗಿನಿಂದ ಬರಬೇಕು. ಪ್ರಕಾಶ್ ಶೆಟ್ಟಿ ಜಾತಿ ಧರ್ಮ ನೋಡಿ ಜನರಿಗೆ ಸಹಾಯ ಮಾಡಿಲ್ಲ. ಬದಲಿಗೆ ಜನರ ನೋವನ್ನು ನೋಡಿ ಸಹಾಯಹಸ್ತ ಚಾಚಿದ್ದಾರೆ. ಈ ಮೂಲಕ ಅವರು ಜನರ ಮನಸ್ಸನ್ನು ಗೆದ್ದಿದ್ದಾರೆ. ಇರೋದೊಂದೇ ಬದುಕು ಅದನ್ನು ದಾನ ಧರ್ಮಗಳ ಮೂಲಕ ಚಂದಗಾಣಿಸಬೇಕು ಎಂದು ಚಿತ್ರನಟ ರಮೇಶ್ ಅರವಿಂದ್ ಹೇಳಿದ್ದಾರೆ.
ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ "ನೆರವು" ಕಾರ್ಯಕ್ರಮ ಸೋಮವಾರ ಸಂಜೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿದ್ದು ರಮೇಶ್ ಸೇರಿದ್ದ ಜನಸ್ತೋಮಕ್ಕೆ ಸ್ಫೂರ್ತಿಯ ಮಾತುಗಳನ್ನಾಡಿದರು.
ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, "ಸಮಾಜದಲ್ಲಿ ನೊಂದವರು, ಬೆಂದವರು, ದೀನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಪ್ರಾರಂಭಿಸಿರುವ ನೆರವು ಕಾರ್ಯಕ್ರಮ ಇಂದು 5 ವರ್ಷದಲ್ಲಿ ನಡೆಯುತ್ತಿದೆ. ನೂರು ಕೈಗಳಿಂದ ದುಡಿದಿದ್ದನ್ನು ಸಾವಿರ ಕೈಗಳಲ್ಲಿ ದಾನ ಮಾಡು, ಅದರ ಫಲ ನಿನಗೆ ಸಾವಿರ ಸಾವಿರ ಕೈಗಳಲ್ಲಿ ಮರಳಿ ಸಿಗುತ್ತದೆ ಎಂಬ ಮಾತಿನಂತೆ ಪ್ರಕಾಶ್ ಶೆಟ್ಟಿ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಕೈಗೊಂಡಿದ್ದಾರೆ ಎಂದರು.
ಕೆ.ಪ್ರಕಾಶ್ ಶೆಟ್ಟಿ ಅವರು ಮಾತಾಡಿ, "ತುಳುನಾಡಿನಲ್ಲಿ ಜನಿಸಿರುವುದೇ ನನಗೆ ಹೆಮ್ಮೆ. ಬಾಲ್ಯದಲ್ಲಿ ನನ್ನ ಬಡತನ ಮತ್ತು ಸಂಕಷ್ಟದ ಕಾರಣಕ್ಕೆ ನಾನು ಊರು ಬಿಟ್ಟು ಬೆಂಗಳೂರಿಗೆ ಹೋಗಬೇಕಾಯಿತು. ಅಲ್ಲಿ ನನ್ನ ಕಷ್ಟ ಕಳೆದು ಯಶಸ್ಸಿನ ಒಂದೊಂದೇ ಮೆಟ್ಟಿಲನ್ನು ಹತ್ತಲು ಸಾಧ್ಯವಾಯಿತು. ಕೋವಿಡ್ ಸಮಯದಲ್ಲಿ ನಾವು ಜನರಿಗೆ ನೆರವು ನೀಡಬೇಕು ಎಂಬ ಉದ್ದೇಶದಿಂದ ಸಾವಿರಾರು ಮಂದಿಗೆ ಆಹಾರ ಕಿಟ್ ಗಳನ್ನು ಹಂಚಿದ್ದೇವೆ. ಐದು ವರ್ಷಗಳ ಹಿಂದೆ ಆರಂಭವಾದ ಸೇವಾ ಯೋಜನೆ ಈ ಬಾರಿ ಸುಮಾರು 5 ಕೋಟಿ ಮೊತ್ತದ ನೆರವನ್ನು ನೀಡುವ ಮೂಲಕ ಯಶಸ್ಸು ಕಂಡಿದೆ ಎಂದರು. ಇದಲ್ಲದೆ, ಮುಂದಿನ ವರ್ಷದಿಂದಲೇ ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಟೌನ್ ಶಿಪ್ ಆರಂಭಿಸುವ ಸುಳಿವು ನೀಡಿದರು. ಇಲ್ಲಿ ವಿಲ್ಲಾ, ಅಪಾರ್ಟ್ಮೆಂಟ್, ಹೊಟೇಲ್, ಕ್ರೀಡಾ ಸಂಕೀರ್ಣ ಎಲ್ಲವೂ ಬರಲಿದೆ ಎಂದರು.
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ. ಗ್ರೂಪ್ ಆಡಳಿತ ನಿರ್ದೇಶಕ ಗೌರವ್ ಪಿ. ಶೆಟ್ಟಿ ಹಾಜರಿದ್ದರು. ಕಾರ್ಯಕ್ರಮದಲ್ಲಿ ಅರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಉದ್ಯಮಿ ಎ.ಸದಾನಂದ ಶೆಟ್ಟಿ, ಮಾಜಿ ಶಾಸಕ ಅಭಯಚಂದ್ರ ಜೈನ್, ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ, ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.
Actor Ramesh Aravind in Mangalore attends program of MRG group at Gold finch city. The founder Chairman of this group, Mr K. Prakash Shetty is a passionate and committed hospitality magnate with over two and half decades of experience in the realms of hospitality and real estate. His passion for fine dining began with the launch of Banjara in 1993, from whence there has been no looking back. Mr Shetty is also committed to societal needs and a strong leaning to help the poor and underprivileged. Over the years, Mr Shetty has won many accolades and recognition from both the state and national government
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm