Mangalore, Covid cases: ಮಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ಬಲಿ ; ಅಸ್ತಮಾ, ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ವ್ಯಕ್ತಿ ಸಾವು 

26-12-23 11:06 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.‌ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಸೋಂಕಿತ 51 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. 

ಮಂಗಳೂರು, ಡಿ.26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.‌ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಸೋಂಕಿತ 51 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. 

ಮಂಗಳೂರು ನಿವಾಸಿ ಮೃತ ವ್ಯಕ್ತಿಯಾಗಿದ್ದು ಇವರು ಡಿ.22ರಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೊನಾ ಸೋಂಕು ದೃಢ ಆಗಿತ್ತು. ಜ್ವರ, ಕಫ, ಉಸಿರಾಟದ ಸಮಸ್ಯೆಯಿಂದ ಆ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದರು.‌

ಈ ಹಿಂದೆ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಬಿ.ಪಿ, ಅಸ್ತಮಾ ಸಮಸ್ಯೆಯೂ ಇತ್ತು. ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸೋಂಕು ಉಲ್ಬಣಗೊಂಡು ಮೃತಪಟ್ಟಿದ್ದಾರೆ. 

ಸದ್ಯ ಮೃತ ವ್ಯಕ್ತಿಯ ಮನೆಯಲ್ಲಿರುವ ಮೂರು ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ. ಸೋಂಕಿನ ಲಕ್ಷಣ ಕಂಡು ಬಂದ್ರೆ ಕೋವಿಡ್ ಪರೀಕ್ಷೆಗೆ ಸೂಚಿಸಲಾಗಿದೆ. ಅಲ್ಲದೆ, ಈಗ ಕೊರೊನಾ ಪಾಸಿಟಿವ್ ಆದರೆ ಈ ಹಿಂದಿನ ರೀತಿಯಲ್ಲೇ ಹೋಮ್ ಕ್ವಾರಂಟೈನ್ ಗೆ ಸೂಚಿಸಲಾಗಿದೆ.

Mangalore Corona case, Asthama patient dies of virus. He was under treatment at Wenlock hospital in Mangalore.