ಬ್ರೇಕಿಂಗ್ ನ್ಯೂಸ್
27-12-23 10:46 pm Mangalore Correspondent ಕರಾವಳಿ
ಮಂಗಳೂರು, ಡಿ.27: ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆ ಒಂದು ಕಾಲದಲ್ಲಿ ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಸ್ಥೆ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇದ್ದು ಇದರ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್ ಯುಐ ವತಿಯಿಂದ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.
ಎರಡು ದಿನಗಳ ಹಿಂದೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆತ್ಮಹತ್ಯೆ ಪ್ರಕರಣ ಖಂಡಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕೆಂದು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿ ಮಾಡಿದ ವಿದ್ಯಾರ್ಥಿ ಮುಖಂಡರು ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಕಳೆದ ಕೆಲವು ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಸಂದೇಶ್ ಅವರಿಗೂ NSUI ಸಮಿತಿಯಿಂದ ಮನವಿ ನೀಡಲಾಯಿತು.
ಈ ಸಂದರ್ಭ ಮೂಡಬಿದ್ರೆ NSUI ಅಧ್ಯಕ್ಷ ಶ್ರವಣ್ ಆಳ್ವ, NSUI ಮುಖಂಡರಾದ ಚಿರಾಗ್ ಪೂಜಾರಿ, ರಫೀಜ್, ಓಂಶ್ರೀ ಪೂಜಾರಿ, ರೋಶ್ಟನ್, ಸೋಹನ್, ಕ್ರಿಷ್ಠನ್, ಸಾಹಿಲ್ ಮಂಚಿಲ, ಮಕ್ವಿನ್ ಉಪಸ್ಥಿತರಿದ್ದರು.
Alvas college suicide, NSUI Suhan Alva and members demand for inquiry at college in Moodbidri Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm