ಬ್ರೇಕಿಂಗ್ ನ್ಯೂಸ್
28-12-23 06:42 pm Mangalore Correspondent ಕರಾವಳಿ
ಮಂಗಳೂರು, ಡಿ.28 : ಪ್ರವಾಸಿ ತಾಣ ಪಣಂಬೂರು ಕಡಲತೀರದಲ್ಲಿ ಹೊಸತಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ಲೋಕಾರ್ಪಣೆ ಮಾಡಲಾಗಿದ್ದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಪಣಂಬೂರು ಕಡಲತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದೀಗ ತೇಲುವ ಸೇತುವೆ ಹೊಸ ಆಕರ್ಷಣೆಯಾಗಿದ್ದು ಜನಾಕರ್ಷಣೆ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಇದಕ್ಕೂ ಹಿಂದೆ ಉಡುಪಿಯ ಮಲ್ಪೆ ಮತ್ತು ಕಾರವಾರ ಕಡಲತೀರದಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದೆ.
ಕದಳೀ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ವತಿಯಿಂದ 125 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗಿದೆ. ಸಮುದ್ರದ ಅಲೆಗಳ ಮೇಲೆ ಹರಡಿರುವ ತೇಲುವ ಸೇತುವೆಯಲ್ಲಿ ಲೈಫ್ ಜಾಕೆಟ್ ಹಾಕ್ಕೊಂಡು ಪ್ರವಾಸಿಗರು ವಿಶೇಷ ಅನುಭವ ಪಡೆಯುತ್ತಿದ್ದಾರೆ.
ಪ್ರವಾಸಿಗರ ಸುರಕ್ಷತೆಗಾಗಿ 12 ಮಂದಿ ಜೀವ ರಕ್ಷಕರು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತೇಲುವ ಸೇತುವೆಯಲ್ಲಿ ನಿಂತು ಗರಿಷ್ಠ 50 ಜನರು ಸೂರ್ಯಾಸ್ತವನ್ನು ವೀಕ್ಷಿಸಬಹುದಾಗಿದೆ. ಉದ್ಘಾಟನೆ ಬಳಿಕ ಮಾತನಾಡಿದ ಖಾದರ್, ಬೀಚ್ ಟೂರಿಸಂ ಅಭಿವೃದ್ಧಿಗೆ ಆದ್ಯತೆ ನೀಡಲು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.
ಇದಲ್ಲದೆ, ಜೆಟ್ ಸ್ಕೀ, ಬೋಟಿಂಗ್ ಇನ್ನಿತರ ಸಾಹಸ ಕ್ರೀಡೆಗಳನ್ನು ಕೂಡ ಬೀಚ್ ನಲ್ಲಿ ಏರ್ಪಡಿಸಲಾಗಿದೆ. ಸದ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸೂಕ್ತ ಜಾಗಕ್ಕಾಗಿ ಅಧ್ಯಯನ ಮಾಡುತ್ತಿದ್ದು ಕೆಲವು ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಬೀಚ್ ಅಭಿವೃದ್ಧಿ ಸಮಿತಿಯ ಡಾ.ರಾಜೇಶ್ ಹುಕ್ಕೇರಿ ಹೇಳಿದರು. ಇನ್ನೊಬ್ಬ ಪಾಲುದಾರ ಲಕ್ಷ್ಮೀಶ ಭಂಡಾರಿ ಉಪಸ್ಥಿತರಿದ್ದರು.
The newly constructed floating bridge at Panambur beach was inaugurated by State Assembly Speaker U.T. Khader has officially inaugurated it.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 02:31 pm
HK News Desk
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am