ಬ್ರೇಕಿಂಗ್ ನ್ಯೂಸ್
29-12-23 11:18 am Mangalore Correspondent ಕರಾವಳಿ
ಬಂಟ್ವಾಳ, ಡಿ.29: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿ.ಸಿ.ರೋಡ್ ಕೈಕಂಬದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ತಡರಾತ್ರಿ ಸಾವನ್ನಪ್ಪಿದ್ದಾಳೆ.
ಬಿಸಿರೋಡಿನ ಕೈಕಂಬ ಸಮೀಪದ ಪಚ್ಚಿನಡ್ಕ ಎಂಬಲ್ಲಿ ನಿನ್ನೆ ರಾತ್ರಿ ಅಪಘಾತ ನಡೆದಿದ್ದು ಸ್ಥಳೀಯ ನಿವಾಸಿ ಚೈತ್ರಾ (22 ) ಮೃತಪಟ್ಟ ಯುವತಿ. ಮಂಗಳೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ ಸಂಜೆ ವೇಳೆ ಬಸ್ಸಿನಲ್ಲಿ ಬಿಸಿ ರೋಡ್ ಬಂದಿದ್ದು ಬಳಿಕ ತಾಯಿ ಜೊತೆಗೆ ಸ್ನೇಹಿತೆಯ ಮನೆ ಕಡೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.
ಸ್ನೇಹಿತೆಯ ರೋಸ್ ಕಾರ್ಯಕ್ರಮಕ್ಕೆಂದು ತಾಯಿ ಜೊತೆ ರಸ್ತೆ ಬದಿ ನಡೆದು ಹೋಗುತ್ತಿದ್ದರು ಎನ್ನಲಾಗಿದ್ದು ಕಾರಿನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಉಂಟಾಗಿದೆ. ಯುವತಿ ಗಂಭೀರ ಗಾಯಗೊಂಡಿದ್ದರು. ಇದೇ ವೇಳೆ, ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಹೆಚ್.ಸಿ.ರಮೇಶ್ ತಮ್ಮ ವಾಹನದಲ್ಲಿ ಯುವತಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಧ್ಯರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಯುವತಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಲ್ಲದೆ, ಮನೆಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾಗಿ ನಿಂತಿತ್ತು. ಘಟನೆ ಬೆನ್ನಲ್ಲೇ ಕಾರನ್ನು ಬಿಟ್ಟು ಅದರಲ್ಲಿದ್ದ ಮೂವರು ಯುವಕರು ಪರಾರಿಯಾಗಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಯುವತಿಗೆ ಮದುವೆ ನಿಶ್ಚಿತಾರ್ಥ
ಚೈತ್ರಾ ಮೇಕಪ್ ಕಲಾವಿದರಾಗಿದ್ದ ದಿ. ಭಾಸ್ಕರ್ ಆಚಾರ್ಯ ಅವರ ಮಗಳಾಗಿದ್ದು ಮಂಗಳೂರಿನ ಪ್ರಸಿದ್ದ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದಳು. ಚೈತ್ರಾಗೆ ಮದುವೆ ನಿಶ್ಚಿತಾರ್ಥ ನಡೆದಿದ್ದು ಮುಂದಿನ ಮಾರ್ಚ್ 3ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಯುವಕರು ಕಾರನ್ನು ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಮಾದಕ ದ್ರವ್ಯ ಸೇವಿಸಿದ್ದರಿಂದ ಈ ರೀತಿ ಘಟನೆ ಆಗಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal car Accident, 22 year old girl dies after car rams her. The deceased has been identified as Chitra. She was just engaged and was getting redy for the marriage.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 02:31 pm
HK News Desk
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am